ಶಿರಸಿ: ಶ್ರಮಜೀವಿಗಳು ಸರ್ಕಾರದ ಯೋಜನೆಯ ಲಾಭ ಪಡೆಯಲು ಆಸಕ್ತಿ ವಹಿಸಲಿ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಮಂಗಳವಾರ (ಜು.13) ತಾಲ್ಲೂಕಿನ ಕಟ್ಟಡ ಹಾಗೂ ಇತರೇ ನಿರ್ಮಾಣ ಕಾರ್ಮಿಕರಿಗೆ ಇಲ್ಲಿನ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಚೇರಿ ಸಭಾಂಗಣದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು. ಮೂರುವರೆ ಸಾವಿರದಷ್ಟು ಕಾರ್ಮಿಕರು ತಾಲ್ಲೂಕಿನಲ್ಲಿದ್ದಾರೆ. ನೋಂದಾಯಿಸಿಕೊಳ್ಳದ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ಕಾರ್ಮಿಕರು ಸರ್ಕಾರದ ಯೋಜನೆಗಳ ಲಾಭ ಪಡೆಯಲು ನೋಂದಾಯಿಸಿಕೊಳ್ಳಬೇಕು ಎಂದರು.
ಶಿಕ್ಷಣ, ಆರೋಗ್ಯ ಸೇರಿ ಕಾರ್ಮಿಕರಿಗೆ ಹಲವು ಲಾಭ ಇದೆ. ಅದರ ಸದುಪಯೋಗಪಡೆದುಕೊಳ್ಳಬೇಕು. ಕಾರ್ಮಿಕ ಸಂಘಟನೆಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು ಎಂದರು. ದುಶ್ಚಟದಿಂದ ದೂರ ಇರಬೇಕು. ಯೋಗ, ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಸುಧಾರಣೆಗೆ ಲಕ್ಷ್ಯ ವಹಿಸಿ ಎಂದೂ ಸಲಹೆ ನೀಡಿದರು.
ಕಾರ್ಮಿಕ ಇಲಾಖೆ ಅಧಿಕಾರಿ ನವೀನ್, ಮಾತನಾಡಿ, ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿ ಮುಂದಾಗಿದೆ. ಕಾರ್ಮಿಕರಿಗೆ ಪರಿಹಾರ ಆಧಾರ ಜೋಡಣೆಯಾದ ಖಾತೆಗೆ ಜಮಾ ಆಗಿದೆ. ಸರ್ಕಾರದ ಸೌಲಭ್ಯ ಪಡೆಯಲು ನೊಂದಾಯಿಸಿಕೊಳ್ಳಬೇಕು ಎಂದರು.
ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಕಾರ್ಮಿಕರ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ ಇದ್ದರು