Advertisement

26ರಂದು ಸಂವಿಧಾನ ದಿನಾಚರಣೆಗೆ ಮುಖ್ಯಮಂತ್ರಿಗೆ ಸ್ಪೀಕರ್‌ ಪತ್ರ

10:40 PM Nov 06, 2019 | Lakshmi GovindaRaju |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಪ್ರತಿ ವರ್ಷ ನವೆಂಬರ್‌ 26ರಂದು ಸಂವಿಧಾನ ದಿನ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಚರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದಾರೆ. 1949ರ ನವೆಂಬರ್‌ 26ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿರುವ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿಯವರು 2015ರಲ್ಲಿ ಘೋಷಣೆ ಮಾಡಿದ್ದರು.

Advertisement

ಆದರೆ, ರಾಜ್ಯದಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ. ಹೀಗಾಗಿ, ಶಾಲಾ ಕಾಲೇಜು, ಖಾಸಗಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳಲ್ಲಿ ಸಂವಿಧಾನ ದಿನವನ್ನು ಕಡ್ಡಾಯ ಹಾಗೂ ಪರಿಣಾಮಕಾರಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next