Advertisement

15 ದಿನ ಬಳಿಕ ಮಾತಾಡುವೆ: ಎಚ್‌.ಡಿ.ಕುಮಾರಸ್ವಾಮಿ

07:30 AM Aug 17, 2017 | Team Udayavani |

ಮೈಸೂರು: ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, 15 ದಿನಗಳ ಕಾಲ ಮೌನ ವಹಿಸುತ್ತೇನೆ. ನಂತರ ಮೌನ ಮುರಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದ ಕುಮಾರಸ್ವಾಮಿ, ನೇರವಾಗಿ ಮೈಸೂರಿಗೆ ಆಗಮಿಸಿ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜೆಡಿಎಸ್‌ ಬಂಡಾಯ ಶಾಸಕರ ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, “ಬಂಡಾಯ ಶಾಸಕರು ಏನು ಮಾಡುತ್ತಿದ್ದಾರೆ? ಎಲ್ಲಿಗೆ ಹೋಗುತ್ತಿದ್ದಾರೆ ಎನ್ನುವುದು ನನಗೆ ಬೇಕಾಗಿಲ್ಲ. ನಮ್ಮ ಎಲ್ಲಾ ಶಾಸಕರ ಮೇಲೂ ನನಗೆ ವಿಶ್ವಾಸವಿದೆ. ರಾಷ್ಟ್ರೀಯ ಪಕ್ಷಗಳಿಂದ ಅನುಕೂಲವಾಗುತ್ತದೆ ಎಂದು ಕೆಲವರು ಆ ಪಕ್ಷಗಳಿಗೆ ಹೋದರೂ ಹೋಗಬಹುದು. ಆದರೆ, ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಜೆಡಿಎಸ್‌ ಅನಿವಾರ್ಯವಾಗಿದೆ.ಭವಿಷ್ಯದಲ್ಲಿ ಜೆಡಿಎಸ್‌ ನೆರವಿನಿಂದ ಅಧಿಕಾರಕ್ಕೆ ಬರಬಹುದೆಂದು ಕಾಂಗ್ರೆಸ್‌, ಬಿಜೆಪಿ ನಾಯಕರು ಭಾವಿಸಿದ್ದಾರೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next