Advertisement

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮಾತನಾಡಿದ್ದು ತಪ್ಪು; ಶಾಸಕ ಸೋಮಶೇಖರರೆಡ್ಡಿ

09:03 AM Mar 01, 2020 | sudhir |

ಬಳ್ಳಾರಿ: ಸ್ವಾತಂತ್ರ‍್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಯತ್ನಾಳ್ ಹೇಳಿಕೆಯನ್ನು ಶಾಸಕ ಜಿ.ಸೋಮಶೇಖರ ರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.

Advertisement

ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ನಾಯಕರು. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿಯವರ ವಿರುದ್ಧ ಹೇಳಿಕೆ ನೀಡಿರುವುದು ಸರಿಯಾಗಿದೆ. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ಜಿ.ಸೋಮಶೇಖರರೆಡ್ಡಿ, ದೊರೆಸ್ವಾಮಿಯವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳುತ್ತಾರೆ. ಅಂದ ಮೇಲೆ ದೇಶಭಕ್ತಿ ಸಹ ಅವರಲ್ಲಿ ಇರಬೇಕಲ್ಲಾ? ಎಂದು ಪ್ರಶ್ನಿಸಿದರು. ದೇಶದ ಏಕತೆ, ಐಕ್ಯತೆಯನ್ನು ಕಾಪಾಡಲು ಅವರೂ ಮುಂದಾಗಬೇಕು. ಅದನ್ನು ಬಿಟ್ಟು, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳನ್ನು ವಿರೋಧಿಸುವುದು ತಪ್ಪು ಎಂದು ಟೀಕಿಸಿದರು.

ಸಿಎಎ ಜಾರಿಗೆ ತಂದಿದ್ದು, ನಮ್ಮ ದೇಶದ ಜನರಿಗೆ ನೋಂದಣಿ ಮಾಡಿಸಿಕೊಂಡು ಬೇರೆ ದೇಶದವರಿಗೆ ವಾಪಸ್ ಕಳುಹಿಸುವ ಉದ್ದೇಶದಿಂದ. ಇಂತಹುದ್ದಕ್ಕೆ ವಿರೋಧ ವ್ಯಕ್ತಪಡಿಸುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಮಾಯಕರನ್ನು ಪ್ರಚೋದಿಸಿ ಪ್ರತಿಭಟಿಸುವಂತೆ ಮಾಡುತ್ತಿದೆ. ಇದು ಸರಿಯಲ್ಲ ಎಂದರು.

ದೆಹಲಿ ಗಲಭೆ ಘಟನೆ ಬಹಳ ನೋವಾಗುತ್ತೆ. ಈ ರೀತಿ ನಡೆಯಬಾರದಿತ್ತು ಎಂದ ಶಾಸಕ ಸೋಮಶೇಖರರೆಡ್ಡಿ, ಪಾಕಿಸ್ತಾನ ಪರ ಘೋಷಣೆ ಕೂಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಚೋದನೆ ನೀಡುವವರಿಗೆ, ಪಾಕಿಸ್ಥಾನ್ ಪರ ಘೋಷಣೆ ಕೂಗುವ ದೇಶದ್ರೋಹಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next