Advertisement
ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.
Related Articles
Advertisement
ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಕನಿಷ್ಠ 20 ವಿರೋಧ ಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಡಪಕ್ಷಗಳು, ತೃಣಮೂಲ ಮತ್ತು ಸಮಾಜವಾದಿ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.
ಪ್ರಜಾಪ್ರಭುತ್ವದ ಆತ್ಮವನ್ನೇ ಹೀರಿರುವಾಗ ಹೊಸ ಸಂಸತ್ ಭವನದಲ್ಲಿ ಯಾವುದೇ ಮೌಲ್ಯಗಳು ಕಾಣುತ್ತಿಲ್ಲ. ಹೀಗಾಗಿ ಸಮಾರಂಭವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷಗಳು ಹೇಳಿವೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಬದಲಿಗೆ ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಿಸುತ್ತಿರುವುದು ವಿಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ.