Advertisement

ನೂತನ ಸಂಸತ್​ ಭವನ ಉದ್ಘಾಟನೆ ಸ್ಮರಣಾರ್ಥ; Special ₹ 75 Coin ಬಿಡುಗಡೆ

12:01 PM May 26, 2023 | Team Udayavani |

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

Advertisement

ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ ಭಾರತ್ ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿಇಂಡಿಯಾ ಎಂಬ ಪದವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ. “ಸಂಸದ್ ಸಂಕುಲ್” ಪದಗಳನ್ನು ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಮತ್ತು ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಅನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.

ಈ ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ತೋಡು ಅಂಚನ್ನು ಹೊಂದಿರುತ್ತದೆ . 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35 ಗ್ರಾಂ ತೂಕದ ನಾಣ್ಯವನ್ನು ತಯಾರಿಸಲಾಗುತ್ತದೆ.

Advertisement

ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಕನಿಷ್ಠ 20 ವಿರೋಧ ಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಡಪಕ್ಷಗಳು, ತೃಣಮೂಲ ಮತ್ತು ಸಮಾಜವಾದಿ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

ಪ್ರಜಾಪ್ರಭುತ್ವದ ಆತ್ಮವನ್ನೇ ಹೀರಿರುವಾಗ ಹೊಸ ಸಂಸತ್​ ಭವನದಲ್ಲಿ ಯಾವುದೇ ಮೌಲ್ಯಗಳು ಕಾಣುತ್ತಿಲ್ಲ. ಹೀಗಾಗಿ ಸಮಾರಂಭವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷಗಳು ಹೇಳಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಬದಲಿಗೆ ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಿಸುತ್ತಿರುವುದು ವಿಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next