ಬೆಳ್ತಂಗಡಿ ಮೇ 9: ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕ ಸಾಮರ್ಥ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರ ಆಯೋಜಿಸಿದರು.
ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಮಂಗಳವಾರ ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿ ದರು. ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಮಾಹಿತಿ ನೀಡಿದರು.