ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್ ಸೋಂಕು ಹೆಚ್ಚಾಗುತ್ತಿರುವಹಿನ್ನೆಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಚುನಾಯಿತ ಪ್ರತಿನಿಧಿಗಳು ಎಚ್ಚತ್ತುಕೊಂಡಿದ್ದು, ಸೋಂಕುನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನವನ್ನು ಆರಂಭಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ(ಬಾಬು) ನಗರಸಭೆಯ ಅಧಿಕಾರಿ ಗಳೊಂದಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಕೋವಿಡ್ ಕುರಿತು ಜನರಲ್ಲಿ ಅರಿವುಮೂಡಿಸುವ ಜೊತೆಗೆ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಲು ನಿರ್ಲಕ್ಷಿಸುವಜನರಿಗೆ ದಂಡ ವಿಧಿಸಿ, ಮಾಸ್ಕ್ ವಿತರಿಸುವ ಯೋಜನೆಯನ್ನು ಆರಂಭಿಸಿದ್ದಾರೆ.
ವಿನಾಕಾರಣ ಮನೆಯಿಂದ ಹೊರ ಬರಬೇಡಿ: ನಗರದ ವಿವಿಧಡೆ ಅಧಿಕಾರಿಗಳೊಂದಿಗೆ ಸಂಚರಿಸಿದನಗರಸಭಾ ಅಧ್ಯಕ್ಷರು, ಜಿಲ್ಲಾ ಕೇಂದ್ರದಲ್ಲಿ ಕೊರೊನಾ ಸೋಂಕಿತರಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ನಾಗರಿಕರು ವಿನಾಕಾರಣ ಮನೆಯಿಂದ ಹೊರ ಬರುವುದನ್ನು ಸ್ವಯಂ ನಿರ್ಬಂಧಿಸಿಕೊಳ್ಳಬೇಕು. ಅಗತ್ಯವಿದ್ದಾಗಮಾತ್ರ ಮನೆಯಿಂದ ಹೊರ ಬರಬೇಕು.ಬರುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕಅಂತರವನ್ನು ಕಾಯ್ದುಕೊಂಡು,ಸ್ಯಾನಿಟೈಸರ್ ಸಿಂಪಡಿಸಿಕೊಂಡುಸುರಕ್ಷತಾ ಕ್ರಮಗಳನ್ನು ಕೈಗೊಂಡುಸೋಂಕು ನಿಯಂತ್ರಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇಲಾಖೆಯೊಂದಿಗೆ ಕೈಜೋಡಿಸಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಮಾರ್ಗ ದರ್ಶನದಲ್ಲಿ ಪೊಲೀಸ್ ಅಧಿಕಾರಿಗಳು, ತಮ್ಮ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಗರಿಕರ ಸಭೆಗಳನ್ನು ಆಯೋಜಿಸಿ, ಕಲ್ಯಾಣಮಂಟಪಗಳ ಮಾಲೀಕರ ಸಭೆಯನ್ನು ಸಂಘಟಿಸಿ ಸರ್ಕಾರದ ನೀತಿ ನಿಯಮಗಳನ್ನುಪಾಲಿಸುವ ಮೂಲಕ ಕೊರೊನಾಸೋಂಕು ನಿಯಂತ್ರಿಸಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಕೋವಿಡ್ ಕಾರ್ಯಪಡೆ ಸಕ್ರಿಯ: ಜಿಪಂ ಸಿಇಒ ಪಿ.ಶಿವಶಂಕರ್ ಮಾರ್ಗದರ್ಶನದಲ್ಲಿ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳ ತಂಡ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ಮಾಡುವ ಗ್ರಾಮಸ್ಥರ ಮೇಲೆ ದಂಡ ವಿಧಿಸುವ ಕಾರ್ಯದಲ್ಲಿ ತಾಪಂ ಇಒ-ಗ್ರಾಪಂ ಪಿಡಿಒಗಳು ನಿರತರಾಗಿದ್ದಾರೆ. ಗ್ರಾಮದಲ್ಲಿ ಈ ಹಿಂದೆ ರಚಿಸಿರುವ ಕೊರೊನಾ ಕಾರ್ಯಪಡೆಯನ್ನು ಸಕ್ರಿಯಗೊಳಿಸಲಾಗಿದೆ.
ಡೀಸಿ ಆರ್.ಲತಾ ಸೂಚನೆಯ ಮೇರೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಾಲಿಗೆ ಚಕ್ರ ಹಾಕಿಕೊಂಡಂತೆ ವರ್ತಿಸುತ್ತಿದ್ದಾರೆ. ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಪ್ರಭಾವ ಹೊಂದಿರುವ ಮುಖಂಡರನ್ನು ಸಂಪರ್ಕ ಸಾಧಿಸಿ, ಕೋವಿಡ್ ನಿಯಂತ್ರಿಸಲು ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದಾರೆ. ವಿಶೇಷವಾಗಿ ಆಯಾ ತಾಲೂಕುಗಳ ತಹಶೀಲ್ದಾರ್, ಆರೋಗ್ಯಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಸಹಿತ ಪ್ರಮುಖ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಸೋಂಕು ನಿಯಂತ್ರಿಸಲು ಪ್ರಯತ್ನ ಮಾಡುತ್ತಿದ್ದಾರೆ.
ನಾಗರಿಕರ ನಿರ್ಲಕ್ಷ್ಯ: ವಿವಿಧೆಡೆ ಕೆಲ ನಾಗರಿಕರು ಇನ್ನೂ ಕೋವಿಡ್- 19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಮೀನಾಮೇಷ ಹಾಗೂ ನಿರ್ಲಕ್ಷ್ಯವಹಿಸುತ್ತಿರುವುದು ಕಂಡು ಬಂದಿದೆ. ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರೆತ್ತಿದ್ದಾರೆ. ನಾಗರಿಕರ ನಿರ್ಲಕ್ಷ್ಯ ಧೋರಣೆಯನ್ನು ನೋಡಿ ನೋಡಿ ಸುಸ್ತಾಗಿರುವ ಅಧಿಕಾರಿಗಳು ಇದೀಗ ದಂಡ ವಿಧಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಗರದಲ್ಲಿ ನಗರ ಸಭೆಯ ಅಧಿಕಾರಿಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಂಡ ವಿಧಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.