ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಪಡೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು, ಹೋಂಐಸೋಲೇಷನ್‌ನಲ್ಲಿ ಇರುವವರಿಗೆವಿಶೇಷವಾಗಿ ಆರೈಕೆ ಮಾಡಲು ಪ್ರಧಾನಿ ಸೂಚನೆ ನೀಡಿದ್ದಾರೆ ಎಂದು ಜಿಲಾಧಿಕಾರಿ ಆರ್.ಲತಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನಿಯಂತ್ರಣ ಕುರಿತು ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲಾಧಿಕಾರಿಗಳು ಜಿಲ್ಲೆಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆತೆಗೆದುಕೊಂಡು ಕಾರ್ಯನಿರ್ವಹಿಸಲು ಮತ್ತು ನಗರ,ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಕಾರ್ಯಪಡೆ ರಚಿಸಿಸಕ್ರಿಯವಾಗಿ ಸೇವೆ ಸಲ್ಲಿಸಲು ಸೂಚನೆ ನೀಡಿದರು.
ಸಂವಾದದಿಂದ ಪ್ರೋತ್ಸಾಹ: ಜಿಲ್ಲೆಯಲ್ಲಿ ಈಗಾಗಲೇನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಪಡೆಗಳನ್ನು ರಚಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಿದ್ದೇವೆ. ದೇಶಾದ್ಯಂತ ವಿವಿಧ ಜಿಲ್ಲೆಗಳಲ್ಲಿಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತುಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳಲುವಿಡಿಯೋ ಸಂವಾದದಿಂದ ಪ್ರೋತ್ಸಾಹ ದೊರೆಯಿತುಎಂದು ಹೇಳಿದರು.
ಪ್ರೇರಣೆ: ಬೇರೆ ರಾಜ್ಯಗಳ ಅಧಿಕಾರಿಗಳು ತಮ್ಮಜಿಲ್ಲೆಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳಕುರಿತು ಪ್ರಧಾನಿಗೆ ಮಾಹಿತಿ ನೀಡಿದರು. ಈವಿಡಿಯೋ ಸಂವಾದದಿಂದ ಜಿಲ್ಲೆಯಲ್ಲಿ ಮತ್ತಷ್ಟುಉತ್ಸಾಹದಿಂದ ಕೆಲಸ ಮಾಡಲು ಸಹಕಾರಿಯಾಗಿದೆಎಂದು ವಿವರಿಸಿದರು.ಮಾಹಿತಿ ನೀಡಲು ಸಹಾಯವಾಣಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಹೋಂಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಬಗ್ಗೆ ವಿಶೇಷ ನಿಗಾವಹಿಸಲು ಪ್ರಧಾನಿ ಸೂಚನೆನೀಡಿದ್ದಾರೆ.
ಅದರಂತೆಯೇ ಈಗಾಗಲೇ ಜಿಲ್ಲೆಯಲ್ಲಿಸಹಾಯವಾಣಿ ಕೇಂದ್ರವನ್ನು ತೆರೆದು 1077 ಸಂಖ್ಯೆನೀಡಿ, ಮಾಹಿತಿ ನೀಡಲು ವ್ಯವಸ್ಥೆ ಒದಗಿಸಲಾಗಿದೆಎಂದು ಹೇಳಿದರು. ಪ್ರಧಾನಿ ಸಂವಾದದಲ್ಲಿ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್‌ಮೀನಾ, ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಉಪವಿಭಾಗಾಧಿಕಾರಿ ರಘುನಂದನ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾಆರ್.ಕಬಾಡೆ ಮತ್ತಿತರರು ಉಪಸ್ಥಿತರಿದ್ದರು.