Advertisement
ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಸಂಘ (ಐಇಎಸ್‌ಎ) ಬುಧವಾರ ಹಮ್ಮಿಕೊಂಡಿದ್ದ ʼವಿಷನ್ ಶೃಂಗಸಭೆ- 2020 ಅನ್ನು ಉದ್ದೇಶಿಸಿ ಆನ್‌ಲೈನ್‌ನಲ್ಲಿ ಮುಖ್ಯ ಭಾಷಣ ಮಾಡಿದ ಎಲೆಕ್ಟ್ರಾನಿಕ್ಸ್, ಐಟಿ- ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಇಡೀ ದೇಶದಲ್ಲಿ ಇಂಥ ಕ್ರಮ ಕೈಗೊಂಡಿರುವ ಏಕೈಕ ಹಾಗೂ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹಾಗೂ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿ ಮಾಡಲು ಇಂಥ ದಿಟ್ಟಹೆಜ್ಜೆ ಇಡಲಾಗಿದೆ ಎಂದರು.
Related Articles
Advertisement
ಹೀಗೆ ವಿನಾಯಿತಿಗಳನ್ನು ಉಪ ಮುಖ್ಯಮಂತ್ರಿ ಪ್ರಕಟಿಸುತ್ತಿದ್ದ ಹಾಗೆಯೇ ವೆಬಿನಾರ್‌ನಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಸಂತಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಹೆಚ್ಚೆಚ್ಚು ಬಂಡವಾಳ ಹೂಡುವ ಭರವಸೆ ನೀಡಿದರು.
ಈಗಾಗಲೇ ಈ ಎಲ್ಲ ಪ್ರಸ್ತಾವನೆಗಳಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ಸಭೆ ನಡೆಯಲಿದ್ದು ಇವೆಲ್ಲಕ್ಕೂ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.
ಯಾವ ಕ್ಷೇತ್ರಕ್ಕೆ ಅನುಕೂಲ?:
ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸ, ಸೆಮಿಕಂಡಕ್ಟರ್‌ಗಳ ವಿನ್ಯಾಸ ಮತ್ತು ತಯಾರಿ, ಎಲೆಕ್ಟ್ರಾನಿಕ್ ಉತ್ಪಾದನಾ ಸೇವೆ, ಸೋಲಾರ್ ಸೆಲ್‌ಗಳ ಉತ್ಪಾದನೆ, ಎಲ್‌ಇಡಿಗಳ ತಯಾರಿ, ಜತೆಗೆ ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ನೀತಿಯ ಅಡಿಯಲ್ಲಿ ಯಾವುದೇ ಉತ್ಪನ್ನವನ್ನು ತಯಾರಿಸಿದರೆ ಅಥವಾ ವಿನ್ಯಾಸ ಮಾಡಿದರೆ ಮೇಲೆ ತಿಳಿಸಿದ ಎಲ್ಲ ಸೌಲಭ್ಯಗಳು ಸಿಗಲಿವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸಕ್ಕೆ ಮೂರು ಜಿಲ್ಲೆಗಳಲ್ಲಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್, ಮೈಸೂರು ಜಿಲ್ಲೆಯಲ್ಲಿ ಪಿಸಿಬಿಎ ಮತ್ತು ಐಸಿಬಿ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್‌ಇಡಿ ದೀಪಗಳನ್ನು ತಯಾರಿ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲೂ 10 ಸಾವಿರ ಉದ್ಯೋಗ ಸೃಷ್ಟಿ ಹಾಗೂ 725 ದಶಲಕ್ಷ ಡಾಲರ್‌ನಷ್ಟು ಬಂಡವಾಳ ಆಕರ್ಷಿಸಲಾಗುತ್ತಿದೆ, 20 ಸಾವಿರಕ್ಕೂ ಹೆಚ್ಚು ಯುವಕರಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು
ಡಿಜಿಟಲ್ ಎಕಾನಮಿ ಮಿಷನ್:
ರಾಜ್ಯದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸಲು ಹಾಗೂ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಹೊಸದಾಗಿ ಬರುವ ಕಂಪನಿಗಳಿಗೆ ಸೇವೆಯನ್ನು ಒದಗಿಸುವ ಹಾಗೂ ನೀತಿನಿರೂಪಣೆ ಮಾಡುವ ಕೆಲಸವನ್ನು ಈ ಸಂಸ್ಥೆ ಮಾಡಲಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 13 ಜಿಲ್ಲೆಗಳಲ್ಲಿ 25 ಕೈಗಾರಿಕಾ ಪ್ರದೇಶಗಳಿದ್ದು, ಇದುವರೆಗೂ 7 ಸಾವಿರ ಎಕರೆಯಷ್ಟು ಭೂಮಿಯನ್ನು ನೀಡಲಾಗಿದೆ. ಈ ಪೈಕಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸ ಕ್ಷೇತ್ರಕ್ಕೆ 7 ಎಸ್‌ಇಝೆಡ್‌ಗಳಿದ್ದು, ಒಟ್ಟು 800 ಎಕರೆ ಭೂಮಿ ಇದೆ ಎಂದು ಡಿಸಿಎಂ ವಿವರ ನೀಡಿದರು.