Advertisement
ಅದಕ್ಕೆ ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕಲಬುರ್ಗಿ ಅವರ ಪತ್ನಿ ಉಮಾದೇವಿ ಮತ್ತು ಗೌರಿ ಅವರ ಸೋದರಿ ಕವಿತಾ ಲಂಕೇಶ್ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ತಮ್ಮನ್ನು ಕೋರಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.