Advertisement

ಅತ್ಯಾಚಾರ ಪ್ರಕರಣ ವಿಲೇವಾರಿಗೆ ವಿಶೇಷ ನ್ಯಾಯಾಲಯ

04:03 PM Dec 29, 2020 | Suhan S |

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅತ್ಯಾಚಾರಮತ್ತು ಫೋಕ್ಸೋ ಪ್ರಕರಣಗಳನ್ನು ಶೀಘ್ರ ವಿಚಾರಣೆ ನಡೆಸಿ, ವಿಲೇವಾರಿ ಮಾಡಲು ಮಂಡ್ಯದಲ್ಲೂ ವಿಶೇಷ ನ್ಯಾಯಾಲಯ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಪಿ. ವಸ್ತ್ರಮಠ್ ತಿಳಿಸಿದರು.

Advertisement

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಲಯ ಮತ್ತು ವಕೀಲರ ಸಂಘದ ವತಿಯಿಂದನಡೆದ ವಿಶೇಷ ಶೀಘ್ರಗತಿ ನ್ಯಾಯಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಿತದೃಷ್ಟಿ ಕಾಪಾಡಲು ಕ್ರಮ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಹೆಚ್ಚಾಗಿ ಅತ್ಯಾಚಾರ, ಫೋಕ್ಸೋ ಪ್ರಕರಣಗಳು ದಾಖ ಲಾಗುತ್ತಿವೆ. ಮಕ್ಕಳ ಹಿತದೃಷ್ಟಿಯಿಂದ ಮತ್ತು ಮಗುವಿನ ಸುರಕ್ಷತೆ, ದೈಹಿಕ, ಭಾವನಾತ್ಮಕ, ಸಾಮಾಜಿಕ ಅಭಿವೃದ್ಧಿಗೆ ಅನುವು ಮಾಡಿಕೊಡುವ ಸಲುವಾಗಿ ಸರ್ವೋತ್ಛ ನ್ಯಾಯಾಲಯವು ಸುಮೋಟೋ ರಿಟ್‌ ಪಿಟಿಷನ್‌ ದಾಖಲಿಸಿಕೊಂಡು ಅತ್ಯಾಚಾರ, ಫೋಕ್ಸೋ ಪ್ರಕರಣಗಳನ್ನು ಶೀಘ್ರ ವಿಲೇವಾರಿಗಾಗಿ ವಿಶೇಷ ತ್ವರಿತ ನ್ಯಾಯಾಲಯಸ್ಥಾಪಿಸುವಂತೆ ಸೂಚಿಸಿತ್ತು. ಅದರಂತೆ ಮಂಡ್ಯದಲ್ಲಿ ಪ್ರಾರಂಭಿಸಲಾಗಿದೆ. ಇದು ಮಕ್ಕಳ ಹಿತದೃಷ್ಟಿಕಾಪಾಡಲು ಹಾಗೂ ಬಾಧಿತರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಶೀಘ್ರ ವಿಲೇವಾರಿಗೆ ಸೂಚನೆ: ನ್ಯಾಯಾಂಗ ಇಲಾಖೆಯ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಕಾರದೊಂದಿಗೆ ವಿಶೇಷ ತ್ವರಿತ ನ್ಯಾಯಾಲಯವನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ 249 ಫೋಕ್ಸೋ ಮತ್ತು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 250 ದೋಷಾರೋಪಣಾಪಟ್ಟಿ ಸಲ್ಲಿಸಿಲ್ಲ. ಈಗಾಗಲೇ 300ಕ್ಕೂ ಹೆಚ್ಚು ಬಾಕಿ ಇವೆ.ಇವೆಲ್ಲವನ್ನೂ ಶೀಘ್ರಗತಿಯಲ್ಲಿ ವಿಲೇವಾರಿ ಮಾಡುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ವಕೀಲರ ಸಂಘದ ಅಧ್ಯಕ್ಷ ಸಿ.ಎಲ್‌.ಶಿವಕುಮಾರ್‌ ಮಾತನಾಡಿ, ಫೋಕ್ಸೋ ಪ್ರಕರಣಗಳು ಬಾಕಿ ಉಳಿದಿದ್ದು, ಈಪ್ರಕರಣಗಳು ವಿಚಾರಣೆ ನಡೆದು ತ್ವರಿತಗತಿಯಲ್ಲಿ ಪೂರ್ಣಗೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.

Advertisement

ನಾವೂ ಸಹ ಇಂಥ ಪ್ರಕರಣಗಳಿಗೆ ಸಹಕಾರ ನೀಡುತ್ತಿದ್ದೇವೆ. ಯಾರು ತಪ್ಪು ಮಾಡಿದ್ದಾರೆ.ಅಂಥವರಿಗೆ ಶಿಕ್ಷೆಯಾಗಬೇಕು. ನಿರಪರಾಧಿಗಳೂ ಇದ್ದಾರೆ. ಅವರೂ ಸಹ ಶೀಘ್ರ ಬಿಡುಗಡೆಯಾಗಲಿ,ಸಮಾಜದ ಸ್ವಾಸ್ಥ್ಯಕ್ಕೆ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಪೂರಕವಾಗಿ ನ್ಯಾಯ ಕೊಡುವ ನಿಟ್ಟಿನಲ್ಲಿ ನ್ಯಾಯಾಲಯಗಳು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

ಸಹಕಾರ ನೀಡಲು ಸಿದ್ಧ: ಹಿಂದೆ ಇದ್ದ ಜಿಲ್ಲಾ ನ್ಯಾಯಾಧೀಶರಾದ ವಿಜಯಕುಮಾರಿ ಅವರಿಗೆಮನವಿ ಮಾಡಿದ್ದೆವು. ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಶೋಷಣೆ ನಡೆದಿರುವ ಪ್ರಕರಣಗಳಲ್ಲಿ ಶೀಘ್ರ ವಿಚಾರಣೆ ನಡೆದು ತಪ್ಪಿತಸ್ಥರಿಗೆಶಿಕ್ಷೆಯಾಗಬೇಕು. ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಸಲ್ಲಿಸಿದ್ದೆವು. ಅವರುಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಮನವಿ ಮಾಡಿದ್ದರು. ಸರ್ಕಾರಈಗ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಶೀಘ್ರ ಕಟ್ಟಡ ನಿರ್ಮಾಣಗೊಂಡು ಎಲ್ಲ ಪ್ರಕರಣಗಳು ತ್ವರಿತಗತಿಯಲ್ಲಿ ವಿಲೇವಾರಿಯಾಗಲು ಸಹಕಾರಿಯಾಗಬೇಕು. ನಾವೂ ಅದಕ್ಕೆ ಪೂರಕವಾಗಿ ಸಹಕಾರ ನೀಡಲು ಸಿದ್ಧವಿದ್ದೇವೆ ಎಂದು ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ದೇವರಾಜೇಗೌಡ ಸೇರಿದಂತೆ ಇತರ ನ್ಯಾಯಾಧೀಶರು ಭಾಗವಹಿಸಿದ್ದರು. ರಾಜ್ಯದ 31 ವಿಶೇಷ ತ್ವರಿತ ನ್ಯಾಯಾಲಯಗಳ ಪೈಕಿ ಮಂಡ್ಯ ಜಿಲ್ಲೆಯಲ್ಲೂ ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆಯಾಗಿದೆ. 18 ವರ್ಷಕ್ಕಿಂತ ಕಡಿಮೆ ಇರು ವಂಥವರ ಮೇಲೆ ದಾಖಲಾಗಿರುವ ಬಾಕಿ ಪ್ರಕರಣಗಳನ್ನೂ ಶೀಘ್ರ ವಿಲೇವಾರಿ ಮಾಡಲಾಗುವುದು. ಎಸ್‌.ಪಿ.ವಸ್ತ್ರಮಠ್ ಜಿಲ್ಲಾ ಪ್ರಧಾನ  ಮತ್ತು ಸತ್ರ ನ್ಯಾಯಾಧೀಶ

Advertisement

Udayavani is now on Telegram. Click here to join our channel and stay updated with the latest news.

Next