Advertisement
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಉದ್ಯಮಿ ಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲೀಗ ಕೈಗಾರಿಕಾ ಸ್ನೇಹಿ ವಾತಾವರಣವಿದೆ. ಸರಕಾರ ಶೀಘ್ರ ದಲ್ಲಿಯೇ ಹೊಸ ಕೈಗಾರಿಕಾ ನೀತಿ ಯನ್ನು ಜಾರಿಗೆ ತರಲಿದ್ದು, ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹಲವು ರಿಯಾಯಿತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
Related Articles
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಎಪ್ರಿಲ್‌ನಲ್ಲಿ ಕೃಷಿ ಮೇಳ ಹಮ್ಮಿಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸರಕಾರ 3 ಕೋ.ರೂ. ಅನುದಾನ ನೀಡಲಿದೆ ಎಂದು ತಿಳಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲು ಪ್ರತ್ಯೇಕ ಟೆಕ್‌ಪಾರ್ಕ್ ಸ್ಥಾಪಿಸುವುದು ಸಹಿತ ಹಲವು ಬೇಡಿಕೆಗಳನ್ನು ಎಫ್ಕೆಸಿಸಿಐ ಸಲ್ಲಿಸಿದ್ದು, ಅವುಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ಹೇಳಿದರು.
Advertisement