Advertisement

ಶಾಲಾ ಶುಲ್ಕದಲ್ಲಿ ವಿಶೇಷ ರಿಯಾಯ್ತಿ

04:23 PM Mar 10, 2021 | Team Udayavani |

ಚಿಕ್ಕಬಳ್ಳಾಪುರ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆಪ್ರತಿಷ್ಟಿತ ಖಾಸಗಿ ಶಾಲೆಗಳಿಗೆ ದಾಖಲಾತಿ ಮಾಡುವ ಸಂದರ್ಭದಲ್ಲಿ ಶಾಲಾ ಶುಲ್ಕದಲ್ಲಿ ವಿಶೇಷ ರಿಯಾಯ್ತಿ ನೀಡಲು ರಾಜ್ಯಮಟ್ಟದಲ್ಲಿನಿಯಮ ರೂಪಿಸುವ ಕುರಿತು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಅಧ್ಯಕ್ಷ ಕೆ.ರವೀಂದ್ರಶೆಟ್ಟಿ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಪಂ ಮಿನಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯವಾಗಿ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯತೆ ಇದೆ. ಸಮುದಾಯದ ಜನರಿಗೆ ಸರ್ಕಾರದಯೋಜನೆಗಳ ಕುರಿತು ಮಾರ್ಗದರ್ಶನ ನೀಡಿಎಲ್ಲಾ ಯೋಜನೆಗಳನ್ನ ಸಮರ್ಪಕವಾಗಿಅನುಷ್ಠಾನಗೊಳಿಸಲು ಇಚ್ಚಾಶಕ್ತಿ ಪ್ರದರ್ಶಿಸಬೇಕು ಎಂದರು.

ಸಮಸ್ಯೆ ಬಗೆಹರಿಸಿ: ಸರ್ಕಾರದ ನಿಯಮದಂತೆ ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ತ್ರೈಮಾಸಿಕ ಸಲಹಾ ಸಮಿತಿ ಸಭೆ ಆಯೋಜಿಸಬೇಕು. ಸಮುದಾಯ ಮುಖಂಡರು ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶ್ರಮ ವಹಿಸಲು ಜಿಲ್ಲಾ ಮಟ್ಟದ ಅಧಿಕಾರಿ ಗಳಿಗೆ ಸೂಚಿಸಿದರು.

ಮೀಸಲಾತಿ ನೀಡಿ: ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ ಅಶ್ವತ್ಥ ನಾರಾಯಣಗೌಡ ಮಾತನಾಡಿ, ಅಲೆಮಾರಿ/ಅರೆ ಅಲೆಮಾರಿ ಸಮುದಾ ಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿಮೀಸಲಾತಿ ಸೌಲಭ್ಯ ನೀಡಬೇಕು ಎಂದರು.

ಹೋಬಳಿ, ಗ್ರಾಮಗಳಲ್ಲಿ ಆಯೋಜಿಸಿ:ಜಿಪಂ ಸದಸ್ಯರಾದ ಕೆ.ಎಂ.ಮುನೇಗೌಡಮಾತನಾಡಿ, ಸರ್ಕಾರ ಜಾರಿಗೆ ತಂದಿರುವಯೋಜನೆಗಳು ನೇರವಾಗಿ ಫಲಾನುಭವಿಗಳಿಗೆತಲುಪಬೇಕು. ಪ್ರತಿಷ್ಠಿತ ಎಲ್ಲಾ ಖಾಸಗಿಶಾಲೆಗಳಲ್ಲಿ ಒಂದಷ್ಟು ದಾಖಲಾತಿಗಳನ್ನು ಈಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲಿಡ ಬೇಕು. ಅಲೆಮಾರಿ ಮತ್ತು ಅರೆ ಅಲೆಮಾರಿಸಮುದಾಯದ ಜನರಿಗೆ ಜಿಲ್ಲಾ ಅಥವಾತಾಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸುವ ಬದಲು ಜಿಲ್ಲೆಯ ಗಡಿಭಾಗದ ಹೋಬಳಿ ಹಾಗೂ ಗ್ರಾಮಗಳಲ್ಲಿ ಆಯೋಜಿಸುವಂತೆ ಜಿಲ್ಲಾ ಮಟ್ಟದಅಧಿಕಾರಿಗಳಿಗೆ ನಿಗಮದ ಅಧ್ಯಕ್ಷರಿಗೆ ಮನವಿ ಮಾಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ನಿಗಮದ ನಾಮನಿರ್ದೇಶನ ಸದಸ್ಯ ಸೂರ್ಯ ನಾರಾಯಣ, ತಾಲೂಕು ನಾಮನಿರ್ದೇಶನ ಸದಸ್ಯ ಗುರುಮೂರ್ತಿ, ಅಲೆಮಾರಿ ಹಾಗೂ ಅರೆಅಲೆಮಾರಿ ಸಮುದಾಯದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ, ಹಿಂದುಳಿದ ವರ್ಗಗಳ ಇಲಾ ಖೆಯ ಜಿಲ್ಲಾ ಅಧಿಕಾರಿ ಡಾ.ಅಶೋಕ್‌, ತಾಪಂ ಸದಸ್ಯರಾದ ಮುತ್ತುರಾಯಪ್ಪ, ಸಮು ದಾಯದ ಜಿಲ್ಲಾ ಮತ್ತು ತಾಲೂಕು ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next