Advertisement
ಶಕ್ತಿನಗರದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ದ.ಕ. ಜಿಲ್ಲಾ ಘಟಕ ಇತರ ಜಿಲ್ಲೆಗಳಿಗೆ ಮಾದರಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
Related Articles
Advertisement
ಹಿಂದುಳಿದ ವರ್ಗಕ್ಕೆ ವಿವಿಧ ಸ್ಥಾನಮಾನಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮಾತನಾಡಿ, ವಿಪಕ್ಷಗಳು ಹಿಂದುಳಿದ ವರ್ಗಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿವೆ ಹೊರತು ಅವರ ಉನ್ನತಿಗಾಗಿ ಯಾವುದೇ ಪ್ರಯತ್ನ ಮಾಡಿಲ್ಲ. ಬಿಜೆಪಿ ಗ್ರಾ.ಪಂ.ನಿಂದ ಸಂಸತ್ ವರೆಗೆ ಹಿಂದುಳಿದ ವರ್ಗಗಳಿಗೆ ವಿವಿಧ ಸ್ಥಾನ, ಜವಾಬ್ದಾರಿಗಳನ್ನು ನೀಡುತ್ತಾ ಬಂದಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ವಿಶೇಷ ಕಾರ್ಯಕಾರಿಣಿಯ ಉದ್ದೇಶ, ಪಕ್ಷ ಸಂಘಟನೆಯಲ್ಲಿ ಮೋರ್ಚಾ ವಹಿಸುತ್ತಿರುವ ಪಾತ್ರ, ಮುಖ್ಯ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು. ಮೋರ್ಚಾದ ರಾಜ್ಯ ಕಾರ್ಯದರ್ಶಿ ಸುರೇಶ್ ಬಾಬಣ್ಣ, ಮೇಯರ್ ಪ್ರೇಮಾನಂದ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅತಿಥಿಗಳಾಗಿದ್ದರು. ಮೋರ್ಚಾದ ಪದಾಧಿಕಾರಿಗಳಾದ ಭರತ್ ಕುಮಾರ್ ಸೂಟರ್‌ಪೇಟೆ, ಅನಿಲ್ ಕುಮಾರ್, ವಿಟಲ ಪೂಜಾರಿ, ವಿನೋದ್ ಮೆಂಡನ್, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಹೇಶ್ ಜೋಗಿ ಸ್ವಾಗತಿಸಿದರು.