Advertisement

ವಿಶೇಷ ಕಾರ್ಯಕಾರಿಣಿ: ಬಿಜೆಪಿಯಿಂದ ಹಿಂದುಳಿದ ವರ್ಗಕ್ಕೆ ವಿಶೇಷ ಆದ್ಯತೆ

12:16 AM Jul 24, 2022 | Team Udayavani |

ಮಂಗಳೂರು: ಬಿಜೆಪಿ ಹಿಂದುಳಿದ ವರ್ಗಗಳಿಗೆ ವಿಶೇಷ ಆದ್ಯತೆ ನೀಡುತ್ತಾ ಬಂದಿದ್ದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ರಾಜಕೀಯವಾಗಿ ವಿಶೇಷ ಸ್ಥಾನಮಾನ, ಅವಕಾಶಗಳು ಹಾಗೂ ಹಲವಾರು ಯೋಜನೆಗಳನ್ನು ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರ ಬಾಬು ಹೇಳಿದರು.

Advertisement

ಶಕ್ತಿನಗರದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಪಕ್ಷ ಸಂಘಟನಾತ್ಮಕವಾಗಿ ಬೆಳೆಯುವಲ್ಲಿ ಹಿಂದುಳಿದ ವರ್ಗಗಳ ಪಾತ್ರ ಮತ್ತು ಕೊಡುಗೆ ಮಹತ್ತರ. ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಸಾಧಿಸುವಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ವಿಶೇಷ ಶ್ರಮಿಸಬೇಕು. ಸರಕಾರ ಹಿಂದುಳಿದ ವರ್ಗಗಳ ಉನ್ನತಿಗೆ ನೀಡಿರುವ ಯೋಜನೆಗಳು, ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅವು ಸಮರ್ಪಕವಾಗಿ ತಲುಪುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.

ಮಾದರಿ ಘಟಕ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ದ.ಕ. ಜಿಲ್ಲಾ ಘಟಕ ಇತರ ಜಿಲ್ಲೆಗಳಿಗೆ ಮಾದರಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕಾರಿಣಿಯನ್ನು ಉದ್ಘಾ ಟಿಸಿದ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ದ.ಕ. ಜಿಲ್ಲೆ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುತ್ತಾ ಬಂದಿದೆ. ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾ ಕೂಡ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

Advertisement

ಹಿಂದುಳಿದ ವರ್ಗಕ್ಕೆ ವಿವಿಧ ಸ್ಥಾನಮಾನ
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಮಾತನಾಡಿ, ವಿಪಕ್ಷಗಳು ಹಿಂದುಳಿದ ವರ್ಗಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿವೆ ಹೊರತು ಅವರ ಉನ್ನತಿಗಾಗಿ ಯಾವುದೇ ಪ್ರಯತ್ನ ಮಾಡಿಲ್ಲ. ಬಿಜೆಪಿ ಗ್ರಾ.ಪಂ.ನಿಂದ ಸಂಸತ್‌ ವರೆಗೆ ಹಿಂದುಳಿದ ವರ್ಗಗಳಿಗೆ ವಿವಿಧ ಸ್ಥಾನ, ಜವಾಬ್ದಾರಿಗಳನ್ನು ನೀಡುತ್ತಾ ಬಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್‌.ಸಿ. ನಾರಾಯಣ್‌ ಅವರು ವಿಶೇಷ ಕಾರ್ಯಕಾರಿಣಿಯ ಉದ್ದೇಶ, ಪಕ್ಷ ಸಂಘಟನೆಯಲ್ಲಿ ಮೋರ್ಚಾ ವಹಿಸುತ್ತಿರುವ ಪಾತ್ರ, ಮುಖ್ಯ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.

ಮೋರ್ಚಾದ ರಾಜ್ಯ ಕಾರ್ಯದರ್ಶಿ ಸುರೇಶ್‌ ಬಾಬಣ್ಣ, ಮೇಯರ್‌ ಪ್ರೇಮಾನಂದ ಶೆಟ್ಟಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್‌ ಶೆಟ್ಟಿ, ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್‌ ಶೆಟ್ಟಿ ಅತಿಥಿಗಳಾಗಿದ್ದರು.

ಮೋರ್ಚಾದ ಪದಾಧಿಕಾರಿಗಳಾದ ಭರತ್‌ ಕುಮಾರ್‌ ಸೂಟರ್‌ಪೇಟೆ, ಅನಿಲ್‌ ಕುಮಾರ್‌, ವಿಟಲ ಪೂಜಾರಿ, ವಿನೋದ್‌ ಮೆಂಡನ್‌, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಹೇಶ್‌ ಜೋಗಿ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next