Advertisement

ಶಬರಿಮಲೆ, ಮಂತ್ರಾಲಯದಲ್ಲಿ ಛತ್ರ ಅಭಿವೃದ್ದಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

08:13 PM Aug 03, 2022 | Team Udayavani |

ಬೆಂಗಳೂರು: ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

Advertisement

ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್‌ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಕರ್ನಾಟಕ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿಗಳ ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next