Advertisement

ಮೂಲ ಸೌಲಭ್ಯಕ್ಕೆ ವಿಶೇಷ ಅನುದಾನ ಬಿಡುಗಡೆ: ರವಿ

09:36 AM Jun 24, 2020 | Suhan S |

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಪ್ರತಿ ಗೊಲ್ಲರಹಟ್ಟಿ ಗ್ರಾಮಗಳ ಮೂಲಭೂತ ಸೌಲಭ್ಯಕ್ಕಾಗಿ 10 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.

Advertisement

ಕಡೂರು ತಾಲೂಕಿನ ಜೋಡಿಲಿಂಗದಹಳ್ಳಿ ಗ್ರಾಮದಲ್ಲಿ ಜೋಡಿಲಿಂಗದಹಳ್ಳಿಯಿಂದ-ತಾಂಡಾ ವರೆಗೂ 20ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜಿಲ್ಲೆಯ ಗೊಲ್ಲರಹಟ್ಟಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ 10 ಲಕ್ಷ ರೂ.ವಿಶೇಷ ಅನುದಾನ ಬಿಡುಗಡೆಗೊಳಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಜೋಡಿಲಿಂಗದಹಳ್ಳಿಯಿಂದ-ಜೋಡಿಲಿಂ ಗದಹಳ್ಳಿ ತಾಂಡಾ ವರೆಗೆ ಒಟ್ಟು 50 ಲಕ್ಷ ರೂ. ರಸ್ತೆ ಕಾಮಗಾರಿಯಲ್ಲಿ ಈಗಾಗಲೇ 30 ಲಕ್ಷ ರೂ.ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ 20ಲಕ್ಷ ವೆಚ್ಚದ ಮುಂದಿನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಬಾಕಿ ಇರುವ ಎಲ್ಲಾ ರಸ್ತೆ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಹನುಮನಹಳ್ಳಿ, ಮತ್ತು ಮಲ್ಲಿಗೇನಹಳ್ಳಿ ರಸ್ತೆ ನಿರ್ಮಾಣದ ಕುರಿತು ಈಗಾಗಲೇ ಪ್ರಸ್ತಾವ ಬಂದಿದ್ದು,ಅನುಮೋದನೆ ಕೂಡ ನೀಡಲಾಗಿದೆ. ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ದೇವರಾಜ್‌ ನಾಯ್ಕ, ಸೋಮಶೇಖರ್‌, ಗ್ರಾಪಂ ಮಾಜಿ ಸದಸ್ಯ ಜಗದೀಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next