Advertisement

State Government ವಿಶೇಷ ಅನುದಾನ: ಕೇಂದ್ರ ವಿತ್ತ ಸಚಿವರಿಗೆ ಸಿಎಂ ಪತ್ರ

11:01 PM Aug 21, 2023 | Team Udayavani |

ಬೆಂಗಳೂರು: ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದಾರೆ.

Advertisement

15ನೇ ಹಣಕಾಸು ಆಯೋಗದ ವರದಿ ಪ್ರಕಾರ ವಿಶೇಷ ಅನುದಾನವಾಗಿ ಕರ್ನಾಟಕಕ್ಕೆ 5,495 ಕೋ. ರೂ. ಶಿಫಾರಸು ಮಾಡಲಾಗಿತ್ತು. ಆದರೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಹಿಂದೆ 14ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ.4.71 ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಪಾಲನ್ನು ಶೇ.3.647ಕ್ಕೆ ಇಳಿಸಲಾಗಿದೆ. ಆಯೋಗವು ನಿಗದಿಪಡಿಸಿದ್ದ ಆದಾಯದ ಮಾನ ದಂಡಗಳನ್ನು ಕರ್ನಾಟಕ ಕಳೆದುಕೊಂಡಿದೆ. 2011-12ರಲ್ಲಿ ರಾಜ್ಯದ ಜಿಎಸ್‌ಡಿಪಿಯನ್ನು ಶೇ. 30ರಷ್ಟು ಹೆಚ್ಚಿಸಲಾಗಿದೆ.

ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರಕಾರದ ಹಣಕಾಸಿನ ಬದ್ಧತೆಗಳನ್ನು ಗಮನ
ದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರ ಸನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದರೂ ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈಗಾಗಲೇ ಸಂಕಷ್ಟದಲ್ಲಿ ರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದರಿಂದ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನೀರಾವರಿ ಯೋಜನೆ ಹಾಗೂ ಫೆರಿಪೆಲರ್‌ ರಸ್ತೆ ನಿರ್ಮಾಣಕ್ಕೆ ಆಯೋಗ ಒತ್ತು ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕಕ್ಕೆ ಬಂದಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆಯಾಗಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next