Advertisement

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಕೈಗಾರಿಕಾ ನೀತಿಗೆ ಬದ್ದ: ಸಚಿವ ದರ್ಶನಾಪುರ

06:20 PM Jun 24, 2023 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಕೈಗಾರಿಕಾ ಬೆಳವಣಿಗೆಗೆ ಪ್ರೋತ್ಸಾಹಿಸುವ ಹಾಗೂ ಹೊಸ ಯೋಜನೆ ರೂಪಿಸುವ ನಿಟ್ಟಿನಲ್ಲಿ ವಿಶೇಷ ಕೈಗಾರಿಕಾ ನೀತಿ ಜಾರಿಗೆ ಬದ್ದತೆ ಹೊಂದಲಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

Advertisement

ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ(ಕೆಕೆಸಿಸಿಐ) ಆಯೋಜಿಸಿದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಕೈಗಾರಿಕಾ ನೀತಿ ರೂಪಿಸುವ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲೇ ಘೋಷಿಸಲಾಗಿದೆ. ಈಗ ಅದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಚರ್ಚಿಸಿ ಸಮಾಲೋಚಿಸಿ ವಿಶೇಷ ಕೈಗಾರಿಕಾ ನೀತಿ ರೂಪಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಅಧಿವೇಶನ ಮುಗಿದ ನಂತರ ಈ ಭಾಗದ ವಾಣಿಜ್ಯ ಸಂಸ್ಥೆ ಪದಾಧಿಕಾರಿಗಳ ಹಾಗೂ ಉದ್ಯಮಿಗಳೊಂದಿಗೆ ಉನ್ನತಾಧಿಕಾರ ಮಟ್ಟದ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲು ನಿರ್ಧರಿಸಲಾಗಿದೆ ಎಂದು ಸಚಿವ ದರ್ಶನಾಪುರ ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ:J-K ಬಿಜೆಪಿಗೆ ಪ್ರಯೋಗಾಲಯವಾಗಿತ್ತು,ದೇಶ ಕಾಶ್ಮೀರೀಕರಣದ ಅಪಾಯದಲ್ಲಿದೆ: ಮುಫ್ತಿ

Advertisement

ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಕಲಬುರಗಿ ನಗರದ ಹೊರ ವಲಯ ನಂದೂರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 100 ಎಕರೆ ಭೂಮಿ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ ಎಂದರು.

ಕೋವಿಡ್ ಸಮಯದಲ್ಲಿ ನಷ್ಟಕ್ಕೊಳಗಾದ ಉದ್ಯಮಿಗಳ ಪುನಶ್ಚೇತನಕ್ಕೆ ಕ್ರಮ‌ ಕೈಗೊಳ್ಳಬೇಕೆಂಬ ಉದ್ಯಮಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಅಧಿಕಾರಿಗಳೊಂದಿಗೆ ಒಂದು ಸುತ್ತಿನ‌ ಮಾತುಕತೆ ನಡೆಸಲಾಗಿದೆ. ಈಗ ಏನೇನು ರಿಯಾಯಿತಿ ನೀಡಲಾಗಿದೆ.‌ ಮುಂದೇನು ನೀಡಬೇಕೆಂಬುದನ್ನು ನಿರ್ಧರಿಸಲಾಗುವುದು ಎಂದು‌ ಸಚಿವರು ಭರವಸೆ ನೀಡಿದರು.

ಚಿತ್ತಾಪುರದಲ್ಲಿ 27 ಎಕರೆ ಕೈಗಾರಿಕಾ ವಸಾಹತು ಪ್ರದೇಶಕ್ಕೆ ಸಂಪರ್ಕ ರಸ್ತೆ ಇಲ್ಲದಿದ್ದಕ್ಕೆ ಕೈಗಾರಿಕಾ ಬೆಳವಣಿಗೆ ಕುಂಠಿತಗೊಂಡಿದೆ. ಆದರೆ ಈಗ ಮೂರು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ.‌ ಆದರೆ ಇನ್ನೂ ಇಲಾಖೆಗೆ ಹಸ್ತಾಂತರ ಗೊಂಡಿಲ್ಲ.‌ ಇದನ್ನು ಬೇಗ ಸಾಕಾರಗೊಳಿಸಲಾಗುವುದು ಎಂದು ಸಚಿವರು ಉದ್ಯಮಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜುವೆಲ್ಲರಿ‌ ಪಾರ್ಕ್: ಕೇಂದ್ರ ಸರ್ಕಾರದ ನೆರವಿನ ಒಂದು ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಜುವೆಲ್ಲರಿ ಪಾಕ್೯ ತುಮಕೂರಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹಿಂದಿನ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಜುವೆಲ್ಲರಿ ಪಾರ್ಕ್ ಸ್ಥಾಪನೆ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದರು ಎಂದು ಚಿನ್ನದ ವ್ಯಾಪಾರಿ ರಾಘವೇಂದ್ರ ಮೈಲಾಪುರ ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರ ನೀಡಿದ ಸಚಿವ ದರ್ಶನಾಪುರ, ಪಾರ್ಕ್ ಸ್ಥಾಪನೆಗಾಗಿ ಸಣ್ಣ ಕೈಗಾರಿಕಾ ಇಲಾಖೆಯಿಂದ 50 ಎಕರೆ ಭೂಮಿ ನೀಡಲಾಗುವುದು.‌ ಒಟ್ಟಾರೆ ಈ ವಿಷಯ ಯಾವ ಹಂತದಲ್ಲಿದೆ‌ ಎಂಬುದನ್ನು ಪರಾಮರ್ಶಿಸಲಾಗುವುದು ಎಂದು ಸ್ಪಷ್ಟ ಪಡಿಸಿದರು.

ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಧ್ಯಕ್ಷ ಶಶಿಕಾಂತ ಪಾಟೀಲ್, ಹಿಂದಿನ ಅಧ್ಯಕ್ಷ ಪ್ರಶಾಂತ ಮಾನಕರ, ಗೌರವ ಕಾರ್ಯದರ್ಶಿ ಮಂಜುನಾಥ ಜೇವರ್ಗಿ ಸೇರಿದಂತೆ ಮುಂತಾದವರಿದ್ದರು. ಉತ್ತಮ‌ ಬಜಾಜ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next