Advertisement

ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲೇ ವಿಶೇಷ ಪ್ಯಾಕೇಜ್ ಘೋಷಣೆ

09:56 AM Aug 14, 2019 | keerthan |

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರವಾಹದಿಂದಾಗಿರುವ ಹಾನಿ ವೀಕ್ಷಿಸಲು ಮಂಗಳವಾರ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು ಎಂದರು.

Advertisement

ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸುತ್ತಿದ್ದೇನೆ. ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ. ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ನಿಮ್ಮ ಜೊತೆ ನಾನೀದ್ದೇನೆ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು .

ಭಾರೀ ಮಳೆಯಿಂದ ತೀರ್ಥಹಳ್ಳಿ ತಾಲೂಕಿನ ಹೆಗ್ಗಲತ್ತಿ ಗ್ರಾಮದಲ್ಲಿ ಭೂಕುಸಿತ ಉಂಟಾಗಿತ್ತು. ಈ ಗ್ರಾಮಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಇದೇ ವೇಳೆ ಹಸು ಕಳೆದುಕೊಂಡ ಮೂರು ಕುಟುಂಬಕ್ಕೆ ಸಿಎಂ ಪರಿಹಾರ ಚೆಕ್ ವಿತರಿಸಿದರು.

ಮುಖ್ಯಮಂತ್ರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ ಸಾಥ್ ನೀಡಿದರು.

Advertisement

ಸಿಎಂ ಭೇಟಿ ವೇಳೆ ಕುಸಿದ ಗ್ರಾಮಸ್ಥ: ಸಿಎಂ ಯಡಿಯೂರಪ್ಪ ಹೆಗಲತ್ತಿ ಗ್ರಾಮಕ್ಕೆ ಭೇಟಿ ವೇಳೆ ಗ್ರಾಮಸ್ಥರೋರ್ವರು ಕುಸಿದ ಘಟನೆ ನಡೆದಿದೆ.

ಮಂಜುನಾಥ್ ಅಸ್ವಸ್ಥಗೊಂಡ ಗ್ರಾಮಸ್ಥ. ಲೋ ಬಿಪಿಗೆ ಒಳಗಾಗಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.


ಕೂಡಲೇ ಸ್ಥಳದಲ್ಲಿದ್ದ ವೈದ್ಯರಿಂದ ಮಂಜುನಾಥ್ ಗೆ ಚಿಕಿತ್ಸೆ ಕೊಡಿಸಲಾಗಿದೆ.

ಗುಡ್ಡಕುಸಿತದಲ್ಲಿ ಮಂಜುನಾಥ್ ಕುಟುಂಬದ ಎರಡು ಎಕರೆ ಅಡಕೆ ತೋಟ ನಾಶವಾಗಿದ್ದು ಇದರಿಂದಾಗಿ ಮಂಜುನಾಥ್ ಒತ್ತಡಕ್ಕೆ ಒಳಗಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next