Advertisement
ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
Related Articles
ಉಳ್ಳಾಲ, ಮೂಲ್ಕಿ, ಮೂಡುಬಿದಿರೆಯಲ್ಲಿ ನೀರು ನಿರ್ವಹಣೆ ಕ್ರಮಗಳ ಬಗ್ಗೆ ಸಚಿವರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿ ಕಾರಿ, ಟ್ಯಾಂಕರ್ ನೀರು ಪೂರೈಕೆ, ಬೋರ್‌ವೆಲ್ ಕೊರೆಸಲು ಅನುಮತಿ ನೀಡಲಾಗಿದೆ. ಉಳ್ಳಾಲ, ಮೂಲ್ಕಿಯ
ಮುಖ್ಯಾಧಿಕಾರಿಗಳು ಚುನಾವಣಾ ಕರ್ತವ್ಯ ದಲ್ಲಿದ್ದು, ನೀರು ನಿರ್ವಹಣೆಗೆ ಸಹಕಾರ ನೀಡದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದರು.
Advertisement
ತಾಲೂಕಿಗೆ 25 ಲಕ್ಷ ರೂ.ಜಿಪಂ. ಸಿಇಒ ಡಾ| ಸೆಲ್ವಮಣಿ ಮಾತನಾಡಿ, ಮಂಗಳೂರು, ಬಂಟ್ವಾಳ ತಾಲೂಕಿನ ಕೆಲವೆಡೆ ಬರ ನಿರ್ವಹಣೆಗೆ ತಲಾ 25 ಲಕ್ಷ ರೂ. ನೀಡಲಾಗಿದೆ. ಪುತ್ತೂರಿನ ಕೆಲವೆಡೆ ನೀರಿದ್ದರೂ ವೋಲ್ಟೆàಜ್ ಸಮಸ್ಯೆಯಿದೆ ಎಂದರು.
ಮೂಡುಬಿದಿರೆ, ಬಂಟ್ವಾಳದಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಸುತ್ತಿದ್ದು, ಬಂಟ್ವಾಳದಲ್ಲಿ ಇದ್ದ ಸಮಸ್ಯೆಯನ್ನು ಸರಿಪಡಿಸಲಾಗಿದೆ ಎಂದು ಉಪವಿಭಾಗ ಅಧಿಕಾರಿ ರವಿಚಂದ್ರ ನಾಯಕ್, ಪುತ್ತೂರಿನಲ್ಲಿ ನೀರಿಗೆ ಸಮಸ್ಯೆಯಾಗಿಲ್ಲ ಎಂದು ಉಪವಿಭಾಗ ಅಧಿಕಾರಿ ಕೃಷ್ಣಮೂರ್ತಿ ಮಾಹಿತಿ ನೀಡಿದರು. ರಾಜಾಕಾಲುವೆ ಭೇಟಿ: ಖಾದರ್
ಎಲ್ಲ ರಾಜಾಕಾಲುವೆಗಳನ್ನು ಸ್ವತ್ಛಗೊಳಿಸ ಲಾಗಿದ್ದು, ಪಾಲಿಕೆ ಆಯುಕ್ತರು, ಉಪವಿಭಾಗಾ ಧಿಕಾರಿಗಳು ಮತ್ತು ಪಂಚಾಯತ್‌ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಇಒ ಮಾಹಿತಿ ನೀಡಿದರು. ಕೆಲವೇ ದಿನಗಳಲ್ಲಿ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಸಚಿವ ಖಾದರ್ ತಿಳಿಸಿದರು. ಘಾಟಿ ನಿರ್ವಹಣೆಗೆ ಒತ್ತು
ಮಳೆಗಾಲ ಎದುರಿಸಲು ದೋಣಿಗಳು, ಹೋಂಗಾರ್ಡ್ ಮತ್ತು ಉಪಕರಣಗಳನ್ನು ಪಟ್ಟಿ ಮಾಡಿದ್ದು, ಸನ್ನದ್ಧ ಸ್ಥಿತಿಯಲ್ಲಿವೆ. ದುರಂತ ಸಂಭವಿಸಿದರೆ ತತ್‌ಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಂಟ್ರೋಲ್ ರೂಂ ವ್ಯವಸ್ಥಿತವಾಗಿದ್ದುª, ಸೆಟಲೈಟ್ ಫೋನ್ ಕೂಡ ನೀಡಲಾಗಿದೆ. ಮಳೆಗಾಲದಲ್ಲಿ 3 ಘಾಟಿಗಳಲ್ಲಿ ಭೂಕುಸಿತ ಸಂಭವಿಸುವ ಮುನ್ಸೂಚನೆಗಳಿವೆ. ಇದರ ನಿರ್ವಹಣೆ ಹೊಣೆ ಲೋಕೋಪಯೋಗಿ ಇಲಾಖೆಗೆ ನೀಡಬೇಕಿದೆ. ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಭೂಕುಸಿತ ನಿರ್ವಹಣೆಗೆ ನಿಗದಿತ ಘಾಟಿಗಳಲ್ಲಿ ಜೆಸಿಬಿ ಮತ್ತು ಸಿಬಂದಿ ಇರಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಚಿವರಿಗೆ ತಿಳಿಸಿದರು.