Advertisement

Special Session: ವಿಶೇಷ ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

04:18 PM Sep 13, 2023 | Team Udayavani |

ನವದೆಹಲಿ: ಸೆಪ್ಟೆಂಬರ್‌ 18ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಪೂರ್ವಭಾವಿಯಾಗಿ ಸೆಪ್ಟೆಂಬರ್‌ 17ರ ಸಂಜೆ 4.30ಕ್ಕೆ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Nipah virus; ಕೇರಳದಲ್ಲಿ ನಿಫಾ ದೃಢ; ದ.ಕ. ಜಿಲ್ಲೆಯಲ್ಲಿ ವಿಶೇಷ ನಿಗಾ

ಇತ್ತೀಚೆಗಷ್ಟೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಸೆ.18ರಿಂದ 22ರವರೆಗೆ ಐದು ದಿನಗಳ ಕಾಲ ಲೋಕಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದ್ದರು.

ಈ ತಿಂಗಳ 18ರಿಂದ ಆರಂಭವಾಗಲಿರುವ ಸಂಸತ್‌ ವಿಶೇಷ ಅಧಿವೇಶನಕ್ಕೂ ಮೊದಲು ಸೆ.17ರ ಸಂಜೆ ಸರ್ವ ಪಕ್ಷ ಮುಖಂಡರ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ಸಂಬಂಧಪಟ್ಟ ಪಕ್ಷದ ಎಲ್ಲಾ ಮುಖಂಡರುಗಳಿಗೂ ಇ-ಮೇಲ್‌ ಹಾಗೂ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಎಕ್ಸ್‌ ನಲ್ಲಿ ಜೋಶಿ ತಿಳಿಸಿದ್ದಾರೆ. ಸೋಮವಾರ ಕರೆದಿರುವ ಸರ್ವ ಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದೆಡೆ ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್‌ ಎಂದು ಬದಲಾಯಿಸುವ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಹಲವು ಊಹಾಪೋಹ ಹರಿದಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next