ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಸೇವೆಗಳಿಗೆ ಸರಕಾರ ಒಪ್ಪಿಗೆ ನೀಡಿದೆ.
ಈ ಸಂಬಂಧ ಸೆ. 1ರಿಂದ ಜಾರಿಯಾಗುವಂತೆ ಸುತ್ತೋಲೆ ಹೊರಡಿಸಿದೆ.
ದೇವಾಲಯಗಳಲ್ಲಿ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಹಿಂದೆ ನಡೆಸುತ್ತಿದ್ದ ಪೂಜೆ ಮತ್ತು ಸೇವೆಗಳನ್ನು ಮುಂದುವರಿಸಬೇಕು.
ಅದನ್ನು ಹೊರತುಪಡಿಸಿ ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ, ಪವಿತ್ರೋತ್ಸವ ಮುಂತಾದ ಉತ್ಸವ ನಡೆಸುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಇಂತಹ ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಾಕಾರದಲ್ಲಿ ಸಾರ್ವಜನಿಕರ ಸಂದಣಿ ಇಲ್ಲದಂತೆ ನಡೆಸಲು ಸೂಚಿಸಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.