ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೇರಿದರೆ ಎಲ್ಲ ಹಿಂದುಳಿದ ರಾಜ್ಯಗಳಿಗೂ ವಿಶೇಷ ರಾಜ್ಯ ಸ್ಥಾನಮಾನ ಕಲ್ಪಿಸಲಾಗುತ್ತದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಎನ್‌ಡಿಎಯಿಂದ ಹೊರಬಂದ ಬಳಿಕ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಇಂಥಹ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ನಟಿ ನೋರಾ ಫತೇಹಿಯನ್ನು 6 ಗಂಟೆಗಳ ಕಾಲ ಪ್ರಶ್ನಿಸಿದ ದೆಹಲಿ ಪೊಲೀಸರು
ಈಗಾಗಲೇ 11 ರಾಜ್ಯಗಳಿಗೆ ವಿಶೇಷ ರಾಜ್ಯ ಸ್ಥಾನಮಾನ ಸಿಕ್ಕಿದೆ. ನಮಗೇನಾದರೂ ಅಧಿಕಾರ ಸಿಕ್ಕಿದರೆ, ಹಿಂದುಳಿದಿರುವಂಥ ಇತರೆ ರಾಜ್ಯಗಳಿಗೂ ಇದೇ ಸ್ಥಾನಮಾನ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನಾವು ಮುಂದಿನ ಬಾರಿ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿದರೆ, ನಾವು ಹಿಂದುಳಿದ ರಾಜ್ಯಗಳಿಗೆ ಏಕೆ ವಿಶೇಷ ಸ್ಥಾನಮಾನವನ್ನು ನೀಡುವುದಿಲ್ಲ? ನಾವು ಬಿಹಾರದ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ವಿಶೇಷ ಸ್ಥಾನಮಾನ ಪಡೆಯಬೇಕಾದ ಕೆಲವು ಹಿಂದುಳಿದ ರಾಜ್ಯಗಳ ಬಗ್ಗೆಯೂ ನಾವು ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ.