Advertisement

ಕಾಫಿ ಬೆಳೆಗಾರರ ಸಮಸ್ಯೆ ತಿಳಿಯಲು ವಿಶೇಷ ಕಾರ್ಯಪಡೆ

01:15 AM Jul 25, 2019 | Sriram |

ಮಡಿಕೇರಿ: ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಪೂರ್ಣವಾಗಿ ಅಧ್ಯಯನ ನಡೆಸಿ ಕಾಫಿ ಮಂಡಳಿ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ನಿಟ್ಟಿನಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ವಿಶೇಷ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

Advertisement

ದಿಲ್ಲಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟ, ಕರ್ನಾಟಕ ಬೆಳೆಗಾರರ ಸಂಘ ಮತ್ತು ಉಪಾಸಿ ಸೇರಿದಂತೆ ವಿವಿಧ ಕಾಫಿ ಬೆಳೆಗಾರ ಸಂಘಟನೆಗಳ ಪ್ರಮುಖರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರೊಂದಿಗೆ ಸಭೆ ನಡೆಸಿ ಕಾಫಿ ಉದ್ಯಮ ಎದುರಿಸುತ್ತಿರುವ ಸಂಕಷ್ಟಗಳ ನಿವಾರಣೆ ನಿಟ್ಟಿನಲ್ಲಿ ಸುದೀರ್ಘ‌ ಚರ್ಚೆ ನಡೆಸಿದರು.

ಈ ಸಂದರ್ಭ ಸಚಿವರು ಕಾಫಿ ಬೆಳೆಗಾರರ ಸಮಸ್ಯೆಯನ್ನು ಖುದ್ದಾಗಿ ಪರಿಶೀಲಿಸಲು ಕೇಂದ್ರದ ವಾಣಿಜ್ಯ ಇಲಾಖೆಯ ತೋಟಗಾರಿಕಾ ವಿಭಾಗದ ಜಂಟಿ ಕಾರ್ಯದರ್ಶಿ ದರ್ಪಣ್‌ ಜೈನ್‌ ಮತ್ತು ತೋಟಗಾರಿಕಾ ವಿಭಾಗದ ನಿರ್ದೇಶಕ ಪಿ. ಶರವಣನ್‌ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಿ ಆದೇಶ ಹೊರಡಿಸಿದರು.

ಶೀಘ್ರದಲ್ಲೇ ಸಮಿತಿಕಾರ್ಯಾರಂಭಈ ಸಮಿತಿಯು ಸಂಸತ್ತಿನ ಅಧಿವೇಶನ ಮುಗಿದ 15 ದಿನಗಳೊಳಗಾಗಿ ಕಾರ್ಯಾರಂಭ ಮಾಡಲಿದ್ದು, ಕಾಫಿ ಬೆಳೆಯುವ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಗಾರರ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಿದೆ. ಸಮಿತಿ ನೀಡುವ ವರದಿಯ ಆಧಾರದಲ್ಲಿ ಕೇಂದ್ರ ಸರಕಾರ ಕಾಫಿ ಬೆಳೆಗಾರರಿಗೆ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ತೀರ್ಮಾನಿಸುವುದಾಗಿ ಪಿಯೂಷ್‌ ಗೋಯಲ್‌ ತಿಳಿಸಿದರು.

ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಸಂಸದರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್‌ ಸಿಂಹ, ತೇಜಸ್ವಿ ಸೂರ್ಯ, ಮುನಿಸ್ವಾಮಿ, ಪ್ರಭಾಕರ ಕೋರೆ, ಶಿವಕುಮಾರ ಉದಾಸಿ, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್‌. ಬೋಜೇಗೌಡ, ಉಪಾಸಿಯ ಕಾಫಿ ಸಮಿತಿ ಅಧ್ಯಕ್ಷ ಜೆಫ್ರಿ ರೆಬೆಲ್ಲೋ, ಕರ್ನಾಟಕ ಬೆಳೆಗಾರರ ಸಂಘದ ಉಪಾಧ್ಯಕ್ಷ ಶಿರಿಷ್‌ ವಿಜಯೇಂದ್ರನ್‌, ಕೊಡಗು ಬೆಳೆಗಾರರ ಸಂಘದ ಪ್ರತಿನಿಧಿ ಐಚೆಟ್ಟಿàರ ಬೋಪಣ್ಣ, ಕಾಫಿ ಎಕ್ಸ್‌ ಪೋರ್ಟರ್ ಅಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ರಾಜ, ಕಾಫಿ ಮಂಡಳಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀವತ್ಸ ಕೃಷ್ಣ ಪಾಲ್ಗೊಂಡಿದ್ದರು.ಕೇಂದ್ರ ಸರಕಾರದ ನಿರ್ಣಯವನ್ನು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್‌ ಸ್ವಾಗತಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next