Advertisement

ಜು.29ರಿಂದ ಬೆಂಗಳೂರಿನಿಂದ ಕಾಶಿಯಾತ್ರೆಗಾಗಿ ವಿಶೇಷ ರೈಲು

01:06 PM Jul 20, 2023 | Team Udayavani |

ಬೆಂಗಳೂರು: ಉತ್ತರ ಭಾರತದ ಹೆಸರಾಂತ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌-ರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವ ರೀತಿಯಲ್ಲಿ ರಾಜ್ಯದ ಯಾತ್ರಿಕರಿಗೆ ಸರ್ಕಾರ ಯೋಜನೆ ರೂಪಿಸಿದೆ.

Advertisement

ನಾಲ್ಕನೇ ಟ್ರಿಪ್ಪಿನ ವಿಶೇಷ ರೈಲು ಜು.29ರಂದು ಬೆಂಗಳೂರಿನಿಂದ ಹೊರಡಲಿದೆ. 2022-23ನೇ ಸಾಲಿನಿಂದ ಜಾರಿಗೆ ಬರುವಂತೆ ರಾಜ್ಯದಿಂದ ಕಾಶಿಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ” ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ’ ಯೋಜನೆಯನ್ನು ಐಆರ್‌ ಸಿಟಿಸಿ ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಯೋಜನೆಯಡಿ ಯಾತ್ರಾರ್ಥಿಗಳಿಗೆ ರೂ.20,000 ರೂ.ಗಳಂತೆ ಪ್ಯಾಕೇಜ್‌ ರೂಪಿಸಲಾಗಿದೆ. ಈ ಮೊತ್ತದಲ್ಲಿ ತಲಾ ರೂ.5,000 ರೂ. ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲಿದೆ. ಉಳಿದ ಮೊತ್ತ ರೂ.15,000 ರೂ.ಗಳನ್ನು ಯಾತ್ರಾರ್ಥಿಗಳು ಪಾವತಿ ಸ ಬೇಕಾಗಿರುತ್ತದೆ. ಈ ವಿಶೇಷ ರೈಲಿನಲ್ಲಿ ತೆರಳುವ ಯಾತ್ರಾ ರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದ್ದು, ಇದು ಒಟ್ಟು 7 ದಿನಗಳ ಪ್ರವಾಸವಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈವರೆಗೂ ಒಟ್ಟು 3 ಟ್ರಿಪ್‌ಗಳನ್ನು ಪೂರೈಸಲಾಗಿದೆ. ಸದರಿ ವಿಶೇಷ ರೈಲಿನಲ್ಲಿ ಒಟ್ಟು 1644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು, ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ದರ 20 ಸಾವಿರ ರೂ.ಗಳ ಪೈಕಿ ಸರ್ಕಾರದಿಂದ ತಲಾ ರೂ. 5,000 ರೂ.ಗಳಂತೆ 82.20 ರೂ.ಲಕ್ಷ ಸಹಾಯ ಧನವನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಲ್ಕನೇ ಟ್ರಿಪ್ಪಿನ ವಿಶೇಷ ರೈಲು ಜು.29ರಂದು ಬೆಂಗಳೂರಿನಿಂದ ಹೊರಡಲಿದ್ದು, ಸದರಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ ಕೆಳಕಂಡ ಲಿಂಕ್‌ ಮೂಲಕ ಅಥವಾ ಐ.ಆರ್‌.ಸಿ.ಟಿ.ಸಿ ಪೋರ್ಟಲ್‌ ಮೂಲಕ ತಮ್ಮ ಟಿಕೇಟ್‌ ಅನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದಿದ್ದಾರೆ.

Advertisement

ಈಗ ಹೊಸದಾಗಿ ಸುಸಜ್ಜಿತ ಕೋಚ್‌ಗಳನ್ನು ಅಳವಡಿಸಲಾಗಿದೆ. ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ ಒಳಗೊಂಡಿರುತ್ತದೆ ಹಾಗೂ ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸಲಿದ್ದಾರೆ.ಈ ಸೌಲಭ್ಯವನ್ನು ರಾಜ್ಯದ ಎಲ್ಲಾ ಭಕ್ತಾಧಿಗಳು ಸದುಪಯೋಗ ಪಡಿಸಿಕೊಂಡು, ಕಾಶಿ ವಿಶ್ವನಾಥ ದರ್ಶನ ಪಡೆಯುವಂತೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next