ಬೆಂಗಳೂರು: ಹೋಳಿ ಹಬ್ಬದ ಪ್ರಯುಕ್ತ ಬೆಂಗಳೂರು-ಕೊಚುವೇಲಿ, ಬೆಂಗಳೂರು- ಕಣ್ಣೂರು ಹಾಗೂ ಹುಬ್ಬಳ್ಳಿ-ಅಹಮದಾಬಾದ್ ನಡುವೆ ನೈಋತ್ಯ ರೈಲ್ವೆಯು ವಿಶೇಷ ರೈಲು ಓಡಿಸಲಿದೆ.
ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತದೆ.
ಮಾ.19 ಮತ್ತು 26ರಂದು ಬೆಂಗಳೂರಿನಿಂದ ರಾತ್ರಿ 11.55ಕ್ಕೆ ಹೊರಡುವ ರೈಲು ಮರುದಿನ ಮಧ್ಯಾಹ್ನ 2 ಗಂಟೆಗೆ ಕಣ್ಣೂರು ನಿಲ್ದಾಣ ತಲುಪಲಿದೆ. ಮಾ.20 ಮತ್ತು 27ರಂದು ಕಣ್ಣೂರಿನಿಂದ ರಾತ್ರಿ 8 ಗಂಟೆಗೆ ಹೊರಟ ರೈಲು ಮರುದಿನ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ.
ಮಾ.23 ಮತ್ತು 30ರಂದು ಬೆಂಗಳೂರಿನಿಂದ ರಾತ್ರಿ 11.55ಕ್ಕೆ ಹೊರಡುವ ರೈಲು ಮರುದಿನ ಸಂಜೆ 7.10ಕ್ಕೆ ಕೊಚುವೇಲಿ ನಿಲ್ದಾಣ ತಲುಪಲಿದೆ. ಮಾ.24 ಮತ್ತು 31ರಂದು ಕೊಚುವೇಲಿ ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಸಂಜೆ 4.30ಕ್ಕೆ ಬೆಂಗಳೂರು ನಿಲ್ದಾಣಕ್ಕೆ ಬರಲಿದೆ.
ಮಾ. 24ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಸಂಜೆ 7.20ಕ್ಕೆ ಅಹಮದಾಬಾದ್ ನಿಲ್ದಾಣ ತಲುಪಲಿದೆ. ಮಾ. 25ರಂದು ಅಹಮದಾಬಾದ್ ನಿಲ್ದಾಣದಿಂದ ರಾತ್ರಿ 9.25ಕ್ಕೆ ಹೊರಟು ಮರುದಿನ ರಾತ್ರಿ 7.45 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.