Advertisement
ಕಾರವಾರದ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾಡಿದ ಅವರು 2011 ರಿಂದ ವರ್ಷದ ಪ್ರತಿ ಆರು ತಿಂಗಳು ಗಿರಿಜನರಿಗೆ ಪೌಷ್ಟಿಕ ಆಹಾರ ಕೊಡುವ ಯೋಜನೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಾರಂಭವಾಗಿತ್ತು. ಜೂನ್ ನಿಂದ ಡಿಸೆಂಬರ್ ತನಕ ಪ್ರತಿ ತಿಂಗಳು ಜಿಲ್ಲೆಯ ಆರು ಸಾವಿರ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ತಲುಪುತ್ತಿತ್ತು. ಆದರೆ 2023 ಜೂನ್ ಜುಲೈ ತಿಂಗಳಿಂದ ಪೌಷ್ಟಿಕ ಆಹಾರ ಸರಬರಾಜಾಗಿಲ್ಲ. ಅಧಿಕಾರಿಗಳು ಆಹಾರ ಸರಬರಾಜಿಗೆ ಟೆಂಡರ್ ಆಗಿಲ್ಲ ಎನ್ನುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಸಮಸ್ಯೆ ಉಂಟಾಗಿದೆ ಎಂದು ಬೆನತ್ ಸಿದ್ದಿ ಹೇಳಿದರು.
Related Articles
Advertisement
ಇದನ್ನೂ ಓದಿ:BJP Karnataka; ನಮ್ಮ ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ: ಬಿ.ವೈ ವಿಜಯೇಂದ್ರ
ಗಿರಿಜನ ಯೋಜನೆ ಅಡಿ, 6000 ಸಿದ್ದಿ ಕುಟುಂಬಗಳಿಗೆ 8 ಕೆಜಿ ಅಕ್ಕಿ, 30 ಕೊಳಿ ಮೊಟ್ಟೆ, 6 ಕೆಜಿ ಬೇಳೆ ಕಾಳು, ಒಂದು ಲೀಟರ್ ನ ಎರಡು ಪ್ಯಾಕೆಟ್ ಅಡುಗೆ ಎಣ್ಣೆ, ಅರ್ಧ ಕೆ.ಜಿ. ತುಪ್ಪ ವಿತರಿಸುತ್ತಿದ್ದರು. ಈ ಸಲ ಟೆಂಡರ್ ಆಗಿಲ್ಲ ಎಂಬ ನೆಪ ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದ ಬುಡಕಟ್ಟು ಜನಾಂಗಕ್ಕೆ ತೊಂದರೆಯಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಅಧಿಕಾರಿಗೆ ಸೋಮವಾರ ಮನವಿ ನೀಡಿದ್ದೇವೆ ಎಂದು ಬೆನೆತ್ ಸಿದ್ದಿ ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಸಹ ಈ ಸಮಸ್ಯೆ ತರಲಾಗಿದೆ. ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ ಎಂದು ಸಿದ್ದಿ ಬುಡಕಟ್ಟು ಸಮುದಾಯದ ಮುಖಂಡರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಿಗಳು ಎಸ್ ಟಿ ಜನಾಂಗದಡಿ ಬರುತ್ತಾರೆ. ಗಿರಿಜನ ಪೌಷ್ಟಿಕ ಆಹಾರ ಸೌಲಭ್ಯದ ಯೋಜನೆ ಬೆಳಗಾವಿ, ಧಾರವಾಡ ಜಿಲ್ಲೆಯ ಸಿದ್ದಿ ಕುಟುಂಬಗಳಿಗೆ ಸಿಗುತ್ತಿಲ್ಲ ಎಂದು ಸಿದ್ದಿ ಬುಡಕಟ್ಟು ಜನಪರ ಸಂಘದ ಅಧ್ಯಕ್ಷ ಬೆನೆತ್ ಸಿದ್ದಿ ಹೇಳಿದರು.
ಥೆರೇಜಾ, ಫಾತಿಮಾ, ಬಸ್ಯ್ಯಾವ್ ಸಿದ್ದಿ ಮುಂತಾದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.