Advertisement

ಚಾಮುಂಡೇಶ್ವರಿಗೆ ಆಷಾಢ ವಿಶೇಷ ಪೂಜೆ

04:51 AM Jun 27, 2020 | Team Udayavani |

ಮೈಸೂರು: ಮೊದಲ ಆಷಾಢ ಶುಕ್ರವಾರದ ಅಂಗವಾಗಿ ನಗರದ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಗಳು ನೆರವೇರಿತು. ಕೋವಿಡ್‌ 19 ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ  ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ಭಕ್ತರಿಲ್ಲದೆ ಚಾಮುಂಡೇಶ್ವರಿ ದೇವಿಗೆ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆದವು.

Advertisement

ಆಷಾಢ ಬಂತೆಂದರೆ ಚಾಮುಂಡಿಬೆಟ್ಟದಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಪ್ರತಿ ಆಷಾಢ ಶುಕ್ರವಾರಗಳಂದು ಲಕ್ಷಾಂತರ ಜನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದರು. ಆದರೆ ಕೋವಿಡ್‌ 19ದಿಂದಾಗಿ ಈ ಬಾರಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಿರುವ ಹಿನ್ನೆಲೆ ಯಾವುದೇ ಸಂಭ್ರಮವಿರಲಿಲ್ಲ.

ಕೋವಿಡ್‌ 19 ಸೋಂಕು ಹೆಚ್ಚಳದಿಂದ ಈಗಾಗಲೇ ಎಲ್ಲಾ ಆಷಾಢ ಶುಕ್ರವಾರ ಮತ್ತು ವರ್ಧಂತಿಯಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿದ್ದು, ದೇವಿಗೆ ನಾಗಲಕ್ಷ್ಮೀ ಅಲಂಕಾರ ಮಾಡಿ ಬೆಳಗ್ಗೆ 4.30ಕ್ಕೆ ಚಾಮುಂಡಿಬೆಟ್ಟದ ದೇವಾಲಯದಲ್ಲಿ ಪ್ರಧಾನ ಆಗಮಿಕ ಡಾ.ಎನ್‌.ಶಶಿಶೇಖರ್‌ ದೀಕ್ಷಿತ್‌, ಅರ್ಚಕ ದೇವಿಪ್ರಸಾದ್‌ ನೇತೃತ್ವದಲ್ಲಿ ಚಾಮುಂಡೇಶ್ವರಿಗೆ ಮಹಾನ್ಯಾಸ ಪೂರ್ವಕ ಅಭಿಷೇಕ, ರುದ್ರಾಭಿಷೇಕ, ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ  ನಡೆಸಲಾಯಿತು.

ಬೆಳಗ್ಗೆ 7.20ಕ್ಕೆ ದೇವಾಲಯದ ಆವರಣದಲ್ಲಿಯೇ ಚಾಮುಂಡಿ ತಾಯಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಬಳಿಕ 8ಕ್ಕೆ ದೇಗುಲದ ಬಾಗಿಲು ಮುಚ್ಚಲಾಯಿತು. ಈ ಸಂದರ್ಭ ಡಿಸಿಪಿ ಪ್ರಕಾಶ್‌ಗೌಡ  ದೇವಾಲಯದ ಸಿಬ್ಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next