Advertisement
ಇಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಜೊತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಲಿದ್ದು, ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ರಾಜ್ಯದ ಪೂರ್ವ ಪ್ರದೇಶದ ಆರ್ಥಿಕತೆಯ ಬೆನ್ನೆಲುಬಾಗಲಿದೆ ಎಂದಿದ್ದಾರೆ. ಯುದ್ಧ ಮುಂತಾದ ತುರ್ತು ಸಂದರ್ಭದಲ್ಲಿ ರಸ್ತೆ ಮೇಲೆ ಯುದ್ದ ವಿಮಾನಗಳನ್ನು ಇಳಿಸಲು ಸಾಧ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿಯಲಿದ್ದಾರೆ.
Related Articles
Advertisement
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋವನ್ನು ಅಜಂಗಢದ ಮೂಲಕ ಪೂರ್ವ ಪ್ರದೇಶಕ್ಕೆ ಸಂಪರ್ಕಿಸುತ್ತದೆ. ಈ ಎಕ್ಸ್‌ಪ್ರೆಸ್‌ವೇ ಅಭಿವೃದ್ಧಿಯೊಂದಿಗೆ, ರಾಜ್ಯದ ಪೂರ್ವ ಪ್ರದೇಶವು ಲಕ್ನೋಗೆ ಮಾತ್ರವಲ್ಲದೆ ಆಗ್ರಾ-ಲಕ್ನೋ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇಗಳ ಮೂಲಕ ರಾಷ್ಟ್ರೀಯ ರಾಜಧಾನಿ ದೆಹಲಿಗೆ ಸಂಪರ್ಕ ಕಲ್ಪಿಸುತ್ತದೆ.
ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ 22 ಫ್ಲೈಓವರ್‌ಗಳು, 7 ರೈಲ್ವೆ-ಓವರ್-ಬ್ರಿಡ್ಜ್‌ಗಳು, 7 ಪ್ರಮುಖ ಸೇತುವೆಗಳು, 114 ಸಣ್ಣ ಸೇತುವೆಗಳು, 6 ಟೋಲ್ ಪ್ಲಾಜಾಗಳು, 45 ವಾಹನ-ಅಂಡರ್‌ಪಾಸ್‌ಗಳು, 139 ಲೈಟ್ ವಾಹನ-ಅಂಡರ್‌ಪಾಸ್‌ಗಳು, 87 ಪಾದಚಾರಿ ಅಂಡರ್‌ಪಾಸ್ ಮತ್ತು 525 ಬಾಕ್ಸ್ ಕಲ್ವರ್ಟ್‌ಗಳನ್ನು ಹೊಂದಿರುತ್ತದೆ.