Advertisement
ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ರೀತಿಯ ಹೇಳಿಕೆಗಳನ್ನು ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಇಂತಹ ವಿಚಾರದಲ್ಲಿ ಮುಖ್ಯಮಂತ್ರಿಯವರು ಸಚಿವರಿಗೆ ಸೂಕ್ತ ಸಲಹೆ ನೀಡುವ ಆವಶ್ಯಕತೆಯಿದೆ ಎಂದಿದ್ದಾರೆ.
Related Articles
ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಬೊಮ್ಮಾಯಿ, ಸಚಿವರು ಇಂಥ ಹೇಳಿಕೆ ನೀಡುತ್ತಿರುವುದು ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ ಅಥವಾ ಹೈಕಮಾಂಡ್ ಮೆಚ್ಚಿಸಲೆಂದೋ ಎಂದು ಪ್ರಶ್ನಿಸಿದ್ದಾರೆ. ಭಾರತೀಯರಾದ ನಾವು ಗೋವಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ ಎಂದಿದ್ದಾರೆ.
Advertisement
ಉಗ್ರ ಹೋರಾಟ: ರವಿಕುಮಾರ್ಹಸುಗಳನ್ನು ನಮ್ಮ ದೇಶದಲ್ಲಿ ಪವಿತ್ರ ಭಾವನೆಯಿಂದ ಪೂಜೆ ಮಾಡುತ್ತಾರೆ. 1948 ಮತ್ತು 1964ರಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಕಾಂಗ್ರೆಸ್ ಸರಕಾರವೇ ಜಾರಿಗೆ ತಂದಿತ್ತು. ಇದರಲ್ಲಿ ಎಮ್ಮೆ ಮತ್ತು ಕೋಣಗಳನ್ನು ವಧಿಸಬಹುದೆಂದು ಇದೆ. 1978ರ ಕಾನೂನಿನಲ್ಲಿ ಎತ್ತು ಮತ್ತು ಹೋರಿಗಳನ್ನು, 2020ರ ನಮ್ಮ ಸರಕಾರ ತಂದ ಕಾನೂನಿನಲ್ಲಿ ಗೋಹತ್ಯೆ ಮತ್ತು ಎತ್ತು/ಹೋರಿಗಳನ್ನು ಹತ್ಯೆ ಮಾಡಬಾರದು ಎಂದು ಹೇಳಲಾಗಿದೆ. ಆದರೆ ಸಿದ್ದರಾಮಯ್ಯ ಸರಕಾರವು ಗೋಹತ್ಯೆಗೆ ಅವಕಾಶ ಮಾಡಿಕೊಡಲು ಹೊರಟಿದೆ. ಕಾನೂನು ರದ್ದು ಪ್ರಸ್ತಾವವನ್ನು ಬಿಜೆಪಿ ಖಂಡಿಸುತ್ತದೆ. ಒಂದೊಮ್ಮೆ ಗೋಹತ್ಯೆ ನಿಷೇಧ ಕಾನೂನು ಹಿಂಪಡೆದರೆ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಗೋವಿನೊಂದಿಗಿನ ಮಾನವನ ಸಂಬಂಧ ತಾಯಿ -ಮಗುವಿನ ಸಂಬಂಧದಷ್ಟೇ ಪವಿತ್ರವಾದದ್ದು. ನಮ್ಮ ಸರಕಾರ ಗೋ ರಕ್ಷಣೆಗೆ ಕಂಕಣಬದ್ಧವಾಗಿ ಕಾರ್ಯನಿರ್ವಹಿಸಿತ್ತು. ಆದರೆ ಪಶುಗಳನ್ನು ರಕ್ಷಿಸಬೇಕಾದ ಸಚಿವರೇ ಇಂತಹ ಹೇಳಿಕೆ ನೀಡಿರುವುದು ಗೋವುಗಳ ಕಳ್ಳ ಸಾಗಣೆ, ಗೋ ಹತ್ಯೆಗೆ ಹಿಂದಿನ ಬಾಗಿಲಿನಿಂದ ಒಪ್ಪಿಗೆ ಕೊಟ್ಟಂತಿದೆ. ಸಚಿವರಿಗೆ ಗೋವುಗಳ ಬಗ್ಗೆ ತಾತ್ಸಾರವೋ ಅಥವಾ ತಮ್ಮ ಖಾತೆಯ ಬಗ್ಗೆ ತಾತ್ಸಾರವೋ? ಅದೇನೇ ಇದ್ದರೂ ಇಂತಹ ಹೇಳಿಕೆ ನೀಡುವುದು ಆ ಹು¨ªೆಯ ಘನತೆಗೆ ತಕ್ಕುದಲ್ಲ.
– ಡಾ| ಅಶ್ವತ್ಥನಾರಾಯಣ, ಮಾಜಿ ಸಚಿವ