ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಕಾರೊಂದು ಕುದುರೆ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯೊಂದು 10 ಅಡಿ ಎತ್ತರಕ್ಕೆ ಹಾರಿ ಸುಮಾರು 20 ಅಡಿ ದೂರಕ್ಕೆ ಎಸೆಯಲ್ಪಟ್ಟ ಘಟನೆ ನಡೆದಿದ್ದು ಇದೀಗ ಇದರ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸೋಮವಾರ(ಡಿ.9) ರಂದು ಘಟನೆ ನಡೆದಿದ್ದು ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಕುದುರೆ ಗಾಡಿ ಒಳ ರಸ್ತೆಯಿಂದ ಮುಖ್ಯರಸ್ತೆಗೆ ಪ್ರವೇಶಿಸಿದೆ ಈ ವೇಳೆ ಮುಖ್ಯ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕುದುರೆ ಸುಮಾರು 10 ಅಡಿ ಎತ್ತರಕ್ಕೆ ಜಿಗಿದು 20 ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿದ್ದ ಕುದುರೆ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಕುದುರೆ ಗಾಡಿಗೆ ಡಿಕ್ಕಿ ಹೊಡೆದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಭಯಹುಟ್ಟಿಸುವಂತಿದೆ.
ಇನ್ನು ಕಾರು ಮತ್ತು ಕುದುರೆ ಗಾಡಿಯಲ್ಲಿ ಇದ್ದ ಒಟ್ಟು ಐವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”