Advertisement

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

08:30 AM May 17, 2024 | Team Udayavani |

ನ್ಯೂಯಾರ್ಕ್: ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

Advertisement

ಮ್ಯಾಸಚೂಸೆಟ್ಸ್‌ನ 14 ವರ್ಷದ ಹ್ಯಾರಿಸ್ ವೊಲೊಬಾಹ್ “ಒನ್ ಚಿಪ್ ಚಾಲೆಂಜ್” ನಲ್ಲಿ ಭಾಗವಹಿಸಿದ ನಂತರ ನಿಧನರಾದರು. ಕ್ಯಾರೊಲಿನಾ ರೀಪರ್ ಮತ್ತು ನಾಗಾ ವೈಪರ್ ಪೆಪ್ಪರ್‌ ಗಳೊಂದಿಗೆ ಉತ್ಪಾದಿಸಿದ ಚಿಪ್ ಇದಾಗಿತ್ತು.

ಕ್ಯಾಪ್ಸೈಸಿನ್ ಎಂಬ ಮೆಣಸಿನಕಾಯಿಯ ಸಾರವನ್ನು ದೊಡ್ಡ ಪ್ರಮಾಣದಲ್ಲಿ ಸೇವಿಸಿದ ನಂತರ ಹ್ಯಾರಿಸ್ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮುಖ್ಯ ವೈದ್ಯಕೀಯ ಪರೀಕ್ಷಕರು ನಿರ್ಧರಿಸಿದ್ದಾರೆ ಎಂದು ಶವಪರೀಕ್ಷೆ ವರದಿ ತಿಳಿಸಿದೆ.

ಕ್ಯಾಲಿಫೋರ್ನಿಯಾದಲ್ಲಿ, ಈ ಚಾಲೆಂಜ್ ನಲ್ಲಿ ಭಾಗವಹಿಸಿದ ನಂತರ ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅದೇ ಕಾರಣಕ್ಕಾಗಿ ಮಿನ್ನೇಸೋಟದಲ್ಲಿ ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next