Advertisement

ಮಹಾರಾಷ್ಟ್ರ: ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ, ಉಗುಳಿದರೆ ಜೈಲುಶಿಕ್ಷೆ

01:14 PM May 30, 2020 | Nagendra Trasi |

ಮುಂಬೈ:ಕೋವಿಡ್ 19 ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಅಥವಾ ಧೂಮಪಾನ ಮಾಡಿದರೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ನಿರ್ಧಾರ ಕೈಗೊಂಡಿದೆ.

Advertisement

ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಯಾರು ಸಾರ್ವಜನಿಕವಾಗಿ ಉಗುಳುವುದು, ಧೂಮಪಾನ ಮಾಡುವುದು ಕಂಡು ಬಂದಲ್ಲಿ ಆರು ತಿಂಗಳ ಜೈಲು ಶಿಕ್ಷೆ ಮತ್ತು ಎರಡನೇ ಬಾರಿ ಸಿಕ್ಕಿಬಿದ್ದರೆ ಎರಡು ವರ್ಷ ಜೈಲುಶಿಕ್ಷೆ ಅನುಭವಿಸಬೇಕು ಎಂದು ತಿಳಿಸಿದೆ.

ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಆರೋಗ್ಯ ಇಲಾಖೆ, ಸೋಂಕು ಹರಡುವ ತಡೆಗಟ್ಟುವ ಕಾಯ್ದೆ (ಎಪಿಡೆಮಿಕ್ ಡೀಸಿಸ್ ಆ್ಯಕ್ಟ್) 1897 ಹಾಗೂ ಭಾರತೀಯ ದಂಡ ಸಂಹಿತೆಯ ಅನ್ವಯ ಅಪರಾಧ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿವರಿಸಿದೆ.

ಕಂಡ, ಕಂಡಲ್ಲಿ ಉಗುಳುವುದು ಕೋವಿಡ್ 19 ವೈರಸ್ ಹರಡಲು ಕಾರಣವಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೋವಿಡ್ 19 ಪ್ರಕರಣ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next