Advertisement

ದೇಶ ಕ್ರೀಡಾ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡುತ್ತಿರುವುದು ಸಂತೋಷದ ವಿಷಯ: ಸ್ವಾಮೀಜಿ

02:55 PM Jul 21, 2022 | Team Udayavani |

ನೆಲಮಂಗಲ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡಾಚಟುವಟಿಕೆಗಳು ಬಹಳ ಮುಖ್ಯ ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Advertisement

ತಾಲೂಕಿನ ಸೋಂಪುರ ಹೋಬಳಿಯ ಶ್ರೀ ಶಿವಗಂಗಾ ಪ್ರೌಢಶಾಲೆಯ ಮೈದಾನದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿಯೂ ಪ್ರತಿಭಾವಂತರಾಗಬೇಕಾದರೆ ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯವಾಗಿದೆ ಎಂದರು.

ಶಿಕ್ಷಣ ಮಂಡಳಿಯಿಂದ ಕ್ರೀಡೆಗೆ ಪ್ರೋತ್ಸಾಹ: ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಮಾತನಾಡಿ, ಸರ್ಕಾರ ಹಾಗೂ ಶಿಕ್ಷಣ ಮಂಡಳಿ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಅದನ್ನು ಸದ್ಭಳಕೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ದೇಶವು ಕ್ರೀಡಾಕ್ಷೇತ್ರದಲ್ಲಿ ಬಹಳ ಸಾಧನೆ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದ್ದು, ಕ್ರೀಡೆಗಳಿಗೆ ನನ್ನ ಸಹಕಾರ ನೀಡುತ್ತಿದ್ದೇನೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಮಾತನಾಡಿದರು. ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಪಟ್ಟಾಭಿರಾಮಯ್ಯ, ಜೆಡಿಎಸ್‌ ಹೋಬಳಿ ಜೆಡಿಎಸ್‌ ಅಧ್ಯಕ್ಷ ಮೋಹನ್‌ ಕುಮಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುಟ್ಟರುದ್ರಾರಾಧ್ಯ, ಉಪಾಧ್ಯಕ್ಷೆ ಸುಜಾತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್‌.ಗಿರೀಶ್‌, ನಿರ್ದೇಶಕ ಬಸವರಾಜಯ್ಯ, ಶಿಕ್ಷಣ ಇಲಾಖೆ ಇಸಿಒ ಸುಚಿತ್ರಾ. ಎಸ್‌. ಎಸ್‌. ಶಿವಕುಮಾರ್‌, ಸಿಆರ್‌ಪಿ ಗಂಗಲಕ್ಷ್ಮಮ್ಮ, ಕ್ರೀಡಾ ಆಯೋಜಕ ವೆಂಕಟಾಚಲಯ್ಯ, ಎಂ.ಎಸ್‌.ರುದ್ರಾರಾಧ್ಯ, ಆರ್‌. ಸಿದ್ದರಾಜಯ್ಯ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next