Advertisement
ರಾಜಭವನದ ಗಾಜಿನ ಮನೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇ ಶನ್‌ನ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ರಾಜ್ಯದ ಎಲ್ಲ ಇಲಾಖೆಗಳಲ್ಲೂ ಶೇ. 3ರಷ್ಟು ಕ್ರೀಡಾ ಮೀಸಲಾತಿ ನೀಡಲು ನಿರ್ಧರಿಸಲಾ ಗಿದೆ. ಕ್ರೀಡೆಗೆ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಶೇ. 2ರಷ್ಟಿದ್ದ ಕ್ರೀಡಾ ಕೋಟಾದ ಮೀಸಲಾತಿಯನ್ನು ಶೇ. 3ಕ್ಕೆ ಹೆಚ್ಚಿಸಲಾಗಿದೆ. ಕಳೆದ 2 ವರ್ಷಗಳಿಂದ 180 ಮಂದಿ ಪೊಲೀಸರು ಕ್ರೀಡಾ ಕೋಟಾ ದಲ್ಲಿ ನೇಮಕಗೊಂಡಿದ್ದಾರೆ’ ಎಂದರು.
ವಿದೇಶಗಳಲ್ಲಿರುವಂತೆಯೇ ಕರ್ನಾಟಕದಲ್ಲೂ ಕ್ರೀಡಾ ವಿಶ್ವವಿದ್ಯಾನಿಲಯ ನಿರ್ಮಿಸುವ ಅಗತ್ಯವಿದೆ. ಈ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದರೆ 5 ಕೋಟಿ ರೂ., ಬೆಳ್ಳಿ ಪದಕಕ್ಕೆ 3, ಕಂಚಿಗೆ 2 ಕೋಟಿ ರೂ. ಹಾಗೂ ಏಷ್ಯನ್ಸ್ ಗೇಮ್ಸ್‌ನಲ್ಲಿ ಪದಕ ಪಡೆದವರಿಗೆ 25 ಲಕ್ಷ ರೂ. ಸರಕಾರದಿಂದ ನೀಡಲಾಗುತ್ತಿದೆ’ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಸಚಿವ ಬಿ. ನಾಗೇಂದ್ರ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕೆ. ಗೋವಿಂದರಾಜ್, ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜು ಉಪಸ್ಥಿತರಿದ್ದರು.