Advertisement

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

05:54 PM Jul 28, 2022 | Team Udayavani |

ದೇವನಹಳ್ಳಿ: ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಗಳು ಸಹಕಾರಿ ಎಂದು ಕರ್ನಾಟಕ ಪಬ್ಲಿಕ್‌ ಶಾಲೆಯ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನಗೊಂಡನಹಳ್ಳಿ ಜಗದೀಶ್‌ ತಿಳಿಸಿದರು.

Advertisement

ತಾಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲಾವರಣದಲ್ಲಿ ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಂದಾಣ ಹೋಬಳಿಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಕ್ರಿಯಾಶೀಲತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗಲಿದೆ.

ಕ್ರೀಡೆಗಳಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೊಂದಿರಬೇಕು. ಆದಾಗ ಮಾತ್ರ ಸದಾ ಜೀವಂತವಾಗಿ ಉಳಿಯಲು ಸಾಧ್ಯವಾಗಲಿದೆ ಎಂದರು. ಕರ್ನಾಟಕ ಪಬ್ಲಿಕ್‌ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಸುಮಾರು 1500ಕ್ಕೂ ಹೆಚ್ಚು ಕುಂದಾಣ ಹೋಬಳಿಯ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮಕ್ಕಳು ಇವೊಂದು ಹೋಬಳಿಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. 3 ದಿನದ ಕ್ರೀಡಾ ಕೂಟ ಇದಾಗಿದ್ದು, ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯವಾದದ್ದು ಎಂದರು.

ವಿಶ್ವನಾಥಪುರ ಗ್ರಾಪಂ ಅಧ್ಯಕ್ಷೆ ಕಲ್ಪನಾ ಮಾತನಾಡಿದರು. ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಅಧೀಕ್ಷಕಿ ಗಾಯಿತ್ರಿದೇವಿ, ಶಿಕ್ಷಣ ಸಂಯೋಜಕಿ ಕೋಮಲ, ಕೆಪಿಎಸ್‌ ಶಾಲಾ ಮುಖ್ಯ ಶಿಕ್ಷಕಿ ಗೀತಾ, ಎಸ್‌ಡಿಎಂಸಿ ಸದಸ್ಯ ರಾದ ಹರೀಶ್‌, ನರಸಿಂಹರಾಜು, ರಾಮಮೂರ್ತಿ, ಬಸವರಾಜ್‌, ಸುಶೀಲಮ್ಮ, ಕೆಪಿಎಸ್‌ ಶಾಲೆಯ ಪ್ರಾಂಶುಪಾಲ ಡಾ.ಶಿವಶಂಕರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ನಾರಾಯಣಸ್ವಾಮಿ, ಶಿಕ್ಷಕರ ಸಂಘದ ಪದಾಧಿಕಾರಿ ರಾಘವೇಂದ್ರ, ಆದರ್ಶ್‌ ಕುಮಾರ್‌, ಯತೀಶ್‌ಕುಮಾರ್‌, ನಾಗೇಶ್‌, ಕೃಷ್ಣ ರಾಮ್‌, ಆನಂದ್‌ಮೂರ್ತಿ, ಕೃಷ್ಣಪ್ಪ, ನಾಗರಾಜ್‌, ದೈಹಿಕ ಶಿಕ್ಷಕರಾದ ಶ್ರೀನಿವಾಸ್‌, ಡಾ. ರಮೇಶ್‌, ವೇಣುಗೋಪಾಲ್‌, ಯಲ್ಲಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next