ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಆಡಗಿರುವ ಪ್ರತಿಭೆ ಮತ್ತು ಮನೋ ಭಾವನೆಯನ್ನು ದಸರಾ ಕ್ರೀಡಾಕೂಟದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಅವರು ಶಿಸ್ತುಬದ್ಧವಾದ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಕೈಜೋಡಿಸುತ್ತಾರೆ ಎಂದು ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಬಂಟ್ವಾಳ ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ದ.ಕ. ಜಿ.ಪಂ., ತಾ.ಪಂ. ಬಂಟ್ವಾಳ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವಜನ ಒಕ್ಕೂಟ ಬಂಟ್ವಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಎಸ್.ವಿ.ಎಸ್. ದೇಗುಲ ವಿದ್ಯಾ ಸಂಸ್ಥೆ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾ| ಮಟ್ಟದ ದಸರಾ ಕ್ರೀಡಾಕೂಟ 2016- 17ರ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಟಾಸ್ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಪುರಸಭಾ ಸದಸ್ಯ ಜಗದೀಶ ಕುಂದರ್, ಯುವ ಜನ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಬಂಟ್ವಾಳ ಕಾರ್ಯ ನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಬಂಟ್ವಾಳ ದೈಹಿಕ ಪರಿವೀಕ್ಷಣಾಧಿಕಾರಿ ರತ್ನಾವತಿ ಎ., ವಿಟ್ಲ ಅಧ್ಯಾಪಕರ ಸಂಘದ ಅಧ್ಯಕ್ಷ ರಮೇಶ್ ನಾಯಕ್, ಪ್ರಮುಖರಾದ ಗಂಗಾಧರ ರೈ ಮಾಣಿ, ಅಖೀಲ ಶೆಟ್ಟಿ, ಮಹಮ್ಮದ್ ಮಂಚಿ, ಎಸ್.ವಿ.ಎಸ್. ದೇಗುಲ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ನಂದಿನಿ ಬಾೖ ಉಪಸ್ಥಿತರಿದ್ದರು. ಬಂಟ್ವಾಳ ಸಹಾಯಕ ಯುವಜನ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿ.ಎಸ್. ಸ್ವಾಗತಿಸಿ, ಬಂಟ್ವಾಳ ದೈ.ಶಿ.ಶಿ. ಸಂಘದ ಅಧ್ಯಕ್ಷ ಜಗದೀಶ್ ಬಾಳ್ತಿಲ ವಂದಿಸಿದರು.
ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಠಗೊಳ್ಳಲು ಕ್ರೀಡಾಕೂಟಗಳು ಬಹಳಷ್ಟು ಸಹಕಾರಿಯಾಗಲಿವೆ.
– ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ