Advertisement

ಮಕ್ಕಳಿಗೆ ಶಿಕ್ಷಣಷ್ಟೇ ಕ್ರೀಡೆಯೂ ಮುಖ್ಯ

04:52 PM Sep 27, 2018 | |

ಹಾವೇರಿ: ಕ್ರೀಡೆಗಳ ಉತ್ತೇಜನಕ್ಕಾಗಿ ಸರ್ಕಾರಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು ಕ್ರೀಡಾಪಟುಗಳು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

Advertisement

ಬುಧವಾರ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪಪೂ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ಜೀವನಕ್ಕಾಗಿ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡಾ ಚಟುವಟಿಕೆಯೂ ಅಷ್ಟೇ ಮುಖ್ಯ. ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಕ್ರೀಡಾಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಸಿ. ಫಿರಜಾದೆ ಓಲಿಂಪಿಕ್‌ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಆಟದಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಯಶಸ್ಸು ಸಾ ಧಿಸುವರೆಗೆ ನಿರಂತರ ಪ್ರಯತ್ನಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪಪೂ ಕಾಲೇಜು ನೌಕರರ ಸಂಘದ ಕಾರ್ಯಾಧ್ಯಕ್ಷರು ಹಾಗೂ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಲಿಂಗಯ್ಯ ಹಿರೇಮಠ, ಜಿಲ್ಲಾ ಪಪೂ ಕಾಲೇಜುಗಳ ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಸ್‌.ಎಚ್‌. ಕಬ್ಬಿನಕಂತಿಮಠ, ಎಚ್‌.ಡಿ. ಗಂಟೇರ, ಬಸವರಾಜ ಕಾಡಪ್ಪನವರ, ಪ್ರಕಾಶ ಡಮ್ಮಳ್ಳಿ, ಜಿ.ಬಿ. ಪೂಜಾರ ಇದ್ದರು.

ಲ್ಯಾಪ್‌ಟಾಪ್‌ ವಿತರಣೆ
ಇದೇ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾದ ಕಮಲಾಕ್ಷಿ ಲಮಾಣಿ, ರಾಜೇಶ್ವರಿ ತಿಪ್ಪಣ್ಣನವರ, ವಿರೇಶ ಲಮಾಣಿ, ದೀಪಾ ಲಮಾಣಿ, ರಂಜಿತಾ ಹರಿಜನ ಹಾಗೂಲಕ್ಷ್ಮೀ ಶೀಗಿಹಳ್ಳಿ ಅವರಿಗೆ ಶಾಸಕರು ಲ್ಯಾಪ್‌ಟಾಪ್‌ ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next