Advertisement

ಪಾಠದಂತೆ ಕ್ರೀಡೆಗೂ ಆದ್ಯತೆ ನೀಡಿ: ವಸಂತ ಬಂಗೇರ

08:15 AM Aug 23, 2017 | Team Udayavani |

ಬೆಳ್ತಂಗಡಿ: ಪಾಠಕ್ಕೆ ಆದ್ಯತೆ ನೀಡಿದಂತೆ ಕ್ರೀಡೆಗೂ ಪ್ರಾಮುಖ್ಯ ನೀಡಬೇಕು. ಸೂಕ್ತ ತರಬೇತಿ ಪಡೆದು ಹಠದಿಂದ ಗುರಿ ಮುಟ್ಟುವ ಸಾಧನೆ ಮಾಡಬೇಕು ಎಂದು ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು. ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಪಂಚಾಯತ್‌ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ತಂಗಡಿ ತಾಲೂಕು ಪಂಚಾಯತ್‌ ಅಧ್ಯಕ್ಷೆ ದಿವ್ಯಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Advertisement

ಸಾಧಕರಿಗೆ ಅಭಿನಂದನೆ
ರಾಷ್ಟ್ರೀಯ ಕ್ರೀಡಾಪಟುಗಳಾಗಿ ಚಿನ್ನದ ಪದಕ ಪಡೆದ ಶಕುಬಾಯಿ ಮತ್ತು ಸಾಲಿಯತ್‌ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಜಿಲ್ಲಾ ಪಂಚಾಯತ್‌ ಸದಸ್ಯೆ ನಮಿತಾ ಕೆ., ಲಾೖಲ ಜಿಲ್ಲಾ ಪಂಚಾಯತ್‌ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ನಾರಾವಿ ಸದಸ್ಯ ಪಿ. ಧರಣೇಂದ್ರ ಕುಮಾರ್‌, ಕಬಡ್ಡಿ ಆ್ಯತ್ಲೆಟಿಕ್‌ ಫೆಡರೇಶನ್‌ನ ಪ್ರಭಾಕರ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು. ಜಯಾನಂದ ಲಾೖಲ ಕಾರ್ಯಕ್ರಮ ನಿರ್ವಹಿಸಿ,  ತಾಲೂಕು ಪಂಚಾಯತ್‌ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಪ್ರಭಾಕರ ನಾರಾವಿ ಸ್ವಾಗತಿಸಿದರು. ಇತ್ತೀಚೆಗೆ ನಿಧನಹೊಂದಿದ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಜೆ. ಕೊಕ್ರಾಡಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಕ್ರೀಡೆಯಲ್ಲಿ ಸಾಧನೆಗೆ ಪ್ರಯತ್ನಿಸಿ
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮುಖ್ಯ. ಅಂತೆಯೇ ಕ್ರೀಡಾಳುಗಳು ವಿದ್ಯಾವಂತರಾಗಿ, ಬುದ್ಧಿವಂತರಾಗಿ ಬೆಳೆಯಲು ಸಾಧ್ಯ. ಕ್ರೀಡಾಪಟುಗಳು ತಾಲೂಕು, ವಿಭಾಗ, ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೆ ಪ್ರಯತ್ನ ಮಾಡಬೇಕು. 
– ಕೆ. ವಸಂತ ಬಂಗೇರ, ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next