ಬೆಂಗಳೂರು: ಕನ್ನಡದ ಸ್ಟಾರ್ ನಟ, ಪವರ್ ಸ್ಟಾರ್, ಅಣ್ಣಾವ್ರ ಪುತ್ರ ಪುನೀತ್ ರಾಜ್ ಕುಮಾರ್ (46 ವ) ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಜಿಮ್ ನಲ್ಲಿ ಅಭ್ಯಾಸ ಮಾಡುವ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಪ್ಪು ಇಹಲೋಕ ತ್ಯಜಿಸಿದರು.
ಇದನ್ನೂ ಓದಿ:ಜೊತೆಗಿರದ ಜೀವ ಎಂದಿಗೂ ಜೀವಂತ…! ‘ಕೋಟ್ಯಾಧಿಪತಿ’ಯನ್ನು ಕಳೆದುಕೊಂಡ ಕರುನಾಡು
ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ. ಮಾಜಿ ಆಟಗಾರ ವಿರೇಂದ್ರ ಸೆಹವಾಗ್ ಟ್ವೀಟ್ ಮಾಡಿದ್ದು, ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ಕೇಳಿ ದುಃಖವಾಯಿತು. ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೊಡೆತ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ ಎಂದಿದ್ದಾರೆ.
Related Articles
ನಮ್ಮ ಪ್ರೀತಿಯ ಪುನೀತ್ ರಾಜ್‌ಕುಮಾರ್ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಕುಟುಂಬಕ್ಕೆ ಈ ಸಮಯದಲ್ಲಿ ಅವರ ಅಭಿಮಾನಿಗಳು ಶಾಂತತೆಯನ್ನು ಕಾಪಾಡಿಕೊಳ್ಳಲು ಮತ್ತು ಅವರ ಸದ್ಗತಿಗಾಗಿ ಪ್ರಾರ್ಥಿಸಲು ನಾನು ವಿನಂತಿಸುತ್ತೇನೆ ಎಂದು ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟಿಗ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದು, “ಪುನೀತ್ ರಾಜ್ ಕುಮಾರ್ ಇನ್ನಿಲ್ಲ ಎಂದು ಕೇಳಿ ಶಾಕ್ ಆಯ್ತು.. ಜೀವನ ತುಂಬಾ ಅನಿರೀಕ್ಷಿತ. ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ” ಎಂದಿದ್ದಾರೆ.