Advertisement

‘ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಆದ್ಯತೆ ಅಗತ್ಯ’

10:19 AM Mar 28, 2022 | Team Udayavani |

ಮಂಗಳಗಂಗೋತ್ರಿ: ಕ್ರೀಡೆಯು ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಅಲ್ಲದೆ ಜೀವನದಲ್ಲಿ ಹೊಸ ಚೈತನ್ಯವನ್ನು ಮೂಡಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನಡೆಯಬೇಕಿದೆ ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಹೇಳಿದರು.

Advertisement

ಮಂಗಳೂರು ವಿವಿ ಕ್ಯಾಂಪಸ್‌ ಸ್ಪೋರ್ಟ್ಸ್ ಕಮಿಟಿ ಇದರ ಆಶ್ರಯದಲ್ಲಿ ನಡೆದ ಅಂತರ್‌ ವಿಭಾಗೀಯ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ವಿಶ್ವವಿದ್ಯಾನಿಲಯಗಳು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ಇಂದು ಸಾಧನೆ ಮಾಡಿದವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕ್ಯಾಂಪಸ್‌ ಸ್ಪೋರ್ಟ್ಸ್ ಕಮಿಟಿ ಇದರ ಮುಖ್ಯಸ್ಥರಾದ ಡಾ| ಜೆರಾಲ್ಡ್‌ ಸಂತೋಷ್‌ ಡಿ’ಸೋಜಾ ಮಾತನಾಡಿ, ಕ್ರೀಡೆ ಎನ್ನುವಂತಹದ್ದು ಒಂದು ಶಕ್ತಿ ಮತ್ತು ಸ್ಫೂರ್ತಿಯಾಗಿದೆ. ಇದು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ನಮಗೆ ಸಿಗುವಂತಹ ಕ್ರೀಡಾ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಮುಂದೆ ಉತ್ತಮ ಕ್ರೀಡಾಪಟುವಾಗಿ ಬೆಳೆದುಬರಲು ಸಾಧ್ಯವಾಗುತ್ತದೆ ಎಂದರು.

ಕ್ರೀಡಾ ಕಾರ್ಯದರ್ಶಿ ಲೋಕೇಶ್‌ , ಸಹ ಕಾರ್ಯದರ್ಶಿ ಕೇಶವ ಪ್ರಸನ್ನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಪ್ರಸನ್ನ ಕುಮಾರ್‌ ಸ್ವಾಗತಿಸಿದರು. ಡಾ| ಹರಿದಾಸ್‌ ಕೂಳೂರು ವಂದಿಸಿದರು. ವಿದ್ಯಾರ್ಥಿನಿ ಶ್ರೇಯಾ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next