Advertisement

ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಕ್ರೀಡಾಮನೋಭಾವ

02:47 PM Aug 05, 2018 | Team Udayavani |

ಸಂಡೂರು: ಪ್ರತಿಯೊಬ್ಬ ಕ್ರೀಡಾಪಟುವೂ ಸಹ ಕ್ರೀಡಾಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಅಗ ನಿಜವಾದ ಪ್ರತಿಭೆ ಹೊರಬರಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಅರ್‌. ಅಕ್ಕಿ ಹೇಳಿದರು.

Advertisement

ತಾಲೂಕಿನ ಬೊಮ್ಮಘಟ್ಟ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ಬಹಳಷ್ಟು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಅಸಕ್ತಿ ಕಳೆದುಕೊಳ್ಳುತ್ತಿದ್ದಾರೆ.  ಶಿಕ್ಷಕರು ಮತ್ತು ಪಾಲಕರು ಮಕ್ಕಳನ್ನು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದರು. 

ಇಂದು ಎಲ್ಲ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೇರಣೆಯ ರೀತಿಯಲ್ಲಿ ಗ್ರಾಮೀಣ ಕ್ರೀಡೆಯಾದ ಕಬ್ಬಡ್ಡಿ ಪಂದ್ಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ. ಇಂತಹ ಕ್ರೀಡೆಗಳಲ್ಲಿ ನಮ್ಮ ಗ್ರಾಮೀಣ ಪ್ರತಿಭೆಗಳು ಆಯ್ಕೆಯಾಗುವುದು ಹೆಚ್ಚು ಎಂದರು.

ಗ್ರಾಪಂ ಅಧ್ಯಕ್ಷೆ ಸಿ.ಎಂ. ಪುಷ್ಪಲತಾ ಮಾತನಾಡಿ, ಇಂದು ಇಡೀ ಗ್ರಾಮವೇ ಇಲ್ಲಿ ಅಗಮಿಸಿ ಕ್ರೀಡೆ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಅರುಣೋದಯ ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಕೂಟದ ನೇತೃತ್ವವಹಿಸಿತ್ತು.

ಶಾಲೆಯ ಮುಖ್ಯಶಿಕ್ಷಕರಾದ ಕೆ.ಎಂ. ಕಲಾವತಿ, ವ್ಯವಸ್ಥಾಪಕರಾದ ಎಚ್‌.ಎಂ. ವಿಶ್ವನಾಥ, ತಾಪಂ ಸದಸ್ಯ ಪಿ. ಪ್ರಕಾಶ್‌, ಗೊಲ್ಲಲಿಂಗಮ್ಮನ ಹಳ್ಳಿ ಗ್ರಾಪಂ ಅಧ್ಯಕ್ಷ ಗೋಪಾಲರಡ್ಡಿ, ತಾಲೂಕಿನ ವಿವಿಧ ಅಧಿಕಾರಿಗಳಾದ ಶಿವರಾಜ, ಎಸ್‌.ಡಿ. ಸಂತಿ, ತೇನ್‌ ಸಿಂಗ್‌ ನಾಯಕ್‌, ಕ್ಲಸ್ಟರ್‌ನ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next