ಲಂಡನ್: ಜಗತ್ತಿನಾದ್ಯಂತ ಹಲವು ಕಂಪನಿಗಳಲ್ಲಿ ಉದ್ಯೋಗ ಕಡಿತ ಪ್ರಕ್ರಿಯೆ ಮುಂದುವರಿದಿದೆ. ಇದೀಗ ಸ್ಪೋಟಿಫೈ ಎಂಬ ಮ್ಯೂಸಿಕ್ ಸ್ಟ್ರೀಮಿಂಗ್ ಕಂಪನಿ ಒಟ್ಟು ಉದ್ಯೋಗಿಗಳ ಪೈಕಿ ಶೇ.6 ಮಂದಿಯನ್ನು ತೆಗೆದು ಹಾಕಲು ಮುಂದಾಗಿದೆ. ಈ ಬಗ್ಗೆ ಕಂಪನಿಯ ಸಿಇಒ ಡ್ಯಾನಿಯಲ್ ಏಕ್ ಸೋಮವಾರ ಘೋಷಣೆ ಮಾಡಿದ್ದಾರೆ. ಬದಲಾಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಂಪನಿಯ ವೆಚ್ಚ ಕಡಿತ ಮಾಡುವುದು ಅನಿವಾರ್ಯವಾಗಿದೆ.
ಸ್ಟಾಕ್‌ಹೋಮ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸ್ಪೋಟಿಫೈ ಕೊರೊನಾ ಅವಧಿಯಲ್ಲಿ ಹೆಚ್ಚಿನ ಜನಪ್ರಿಯತೆ ಹೊಂದಿತ್ತು. ಇನ್ನೊಂದೆಡೆ, ಭಾರತದಲ್ಲಿ ಕೂಡ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಹಾಗೂ ಸ್ಟಾರ್ಟ್‌ಅಪ್ ಕಂಪನಿಗಳು ಮುಂದಿನ ಆರು ತಿಂಗಳ ಅವಧಿಯಲ್ಲಿ 15ರಿಂದ 20 ಸಾವಿರ ಮಂದಿಯನ್ನು ಕೆಲಸದಿಂದ ತೆಗೆದು ಹಾಕುವ ಸಾಧ್ಯತೆ ಇದೆ.