Advertisement

ಅಡಿಲೇಡ್ ಟೆಸ್ಟ್ ಗೆ ತಂಡ ಪ್ರಕಟ: ಗಿಲ್ ಗೆ ಸಿಗದ ಚಾನ್ಸ್, ತಂಡದಲ್ಲಿ ಮೂವರು ಪೇಸರ್ಸ್

03:51 PM Dec 16, 2020 | keerthan |

ಅಡಿಲೇಡ್: ಆಸ್ಟ್ರೇಲಿಯಾದ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರಿ ಕುತೂಹಲ ಮೂಡಿಸಿದ್ದ ಆರಂಭಿಕನ ಸ್ಥಾನಕ್ಕೆ ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಗುರುವಾರದಿಂದ ಮೊದಲ ಟೆಸ್ಟ್ ಆರಂಭವಾಗಲಿದೆ. ಇದು ಭಾರತ- ಆಸೀಸ್ ನಡುವಿನ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಎನ್ನುವುದು ವಿಶೇಷ.

ಮಯಾಂಕ್ ಅಗರ್ವಾಲ್ ಜೊತೆ ಪೃಥ್ವಿ ಶಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಕೊಹ್ಲಿ, , ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮಾ ವಿಹಾರಿ ಆಡಲಿದ್ದಾರೆ.

ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಅವರನ್ನು ಆಯ್ಕೆ ಮಾಡಲಾಗಿದೆ. ಅಭ್ಯಾಸ ಪಂದ್ಯದಲ್ಲಿ ಪಂತ್ ಶತಕ ಬಾರಿಸಿದರೂ ಅನುಭವಿ ಕೀಪರ್ ಗೆ ಮಣೆ ಹಾಕಲಾಗಿದೆ.

ತಂಡದಲ್ಲಿ ಮೂವರು ವೇಗಿಗಳಿದ್ದು, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ವೇಗದ ಬೌಲಿಂಗ್ ಜವಾಬ್ದಾರಿ ಹೊರಲಿದ್ದಾರೆ. ಸ್ಪಿನ್ನರ್ ಆಗಿ ಅಶ್ವಿನ್ ಆಯ್ಕೆಯಾಗಿದ್ದಾರೆ.

Advertisement

ತಂಡ:

ವಿರಾಟ್ ಕೊಹ್ಲಿ (ನಾ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ವೃದ್ಧಿಮಾನ್ ಸಹಾ (ವಿ.ಕೀ), ಆರ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

Advertisement

Udayavani is now on Telegram. Click here to join our channel and stay updated with the latest news.

Next