ಮುಂಬೈ: ಲಂಕಾ ಸರಣಿಯ ಬಳಿಕ ನಡೆಯಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಆಯ್ಕೆಯಾಗಿಲ್ಲ. ಕೌಟುಂಬಿಕ ಕಾರಣ ನೀಡಿ ಅವರಿಬ್ಬರೂ ಸರಣಿಯಿಂದ ಹೊರಗುಳಿದಿದ್ದಾರೆ.
ಬಹಳ ಕಾಯುವಿಕೆಯ ಬಳಿಕ ಪೃಥ್ವಿ ಶಾ ಅವರಿಗೆ ರಾಷ್ಟ್ರೀಯ ತಂಡದ ಕರೆ ಬಂದಿದೆ. ಅವರನ್ನು ಕಿವೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಟಿ20 ತಂಡಕ್ಕೆ ನೇಮಕ ಮಾಡಲಾಗಿಲ್ಲ. ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.
ಲಂಕಾ ಸರಣಿಯಲ್ಲಿ ಗಾಯಗೊಂಡಿರುವ ಸಂಜು ಸ್ಯಾಮ್ಸನ್ ರನ್ನು ಈ ಬಾರಿ ಕಡೆಗಣಿಸಲಾಗಿದೆ. ಟಿ20ಗೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಜೊತೆಗೆ ಜಿತೇಶ್ ಶರ್ಮಾ ನೇಮಕವಾಗಿದ್ದಾರೆ. ಏಕದಿನ ತಂಡಕ್ಕೆ ಕೆಎಸ್ ಭರತ್ ಅವರು ವಿಕೆಟ್ ಆಗಿ ಆಯ್ಕೆಯಾಗಿದ್ದಾರೆ.
Related Articles
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ತಂಡ ಆಯ್ಕೆ ಮಾಡಲಾಗಿದೆ. ಸೂರ್ಯಕುಮಾರ್ ಮತ್ತು ಇಶಾನ್ ಕಿಶನ್ ಟೆಸ್ಟ್ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ಈ ಸರಣಿಯೊಂದಿಗೆ ತಂಡ ಸೇರಿಕೊಳ್ಳಲಿದ್ದಾರೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿ.ಕೀ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿ.ಕೀ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿ.ಕೀ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿ,ಕೀ), ಇಶಾನ್ ಕಿಶನ್ (ವಿ.ಕೀ), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.