Advertisement

ಶೀಘ್ರದಲ್ಲಿ HDK ಭೂಹಗರಣದ ಸಂಪೂರ್ಣ ದಾಖಲೆ ಬಿಡುಗಡೆ :ಎಸ್.ಆರ್.ಹಿರೇಮಠ

03:27 PM Dec 02, 2020 | sudhir |

ರಾಯಚೂರು: ಒಂದು ತಿಂಗಳಲ್ಲಿ ಹೆಚ್ ಡಿಕೆ ಭೂಹಗರಣ ಸಂಪೂರ್ಣ ದಾಖಲೆ ಬಿಚ್ಚಿಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಮಾದೇಗೌಡರು ಹೆಚ್ ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.

ಕಾಫಿ ಡೇ ಹಗರಣ ಕುರಿತು ಸಿಬಿಐ ನಿವೃತ್ತ ಡಿಐಜಿ ಅಶೋಕ ಮಲ್ಹೋತ್ರ ವರದಿ ನೀಡಿದ್ದಾರೆ. ಆದರೆ, ವರದಿಯಲ್ಲಿ ಅನೇಕ ಭ್ರಷ್ಟರ ,ಭ್ರಷ್ಟತನದ ಉಲ್ಲೇಖವಿಲ್ಲ. ಡಿಕೆಶಿ, ಮಾಳವಿಕ ಹೆಗಡೆ ಸೇರಿ ಅನೇಕರು ಸಾರ್ವಜನಿಕ ಹಣ ಲೂಟಿ ಮಾಡಿದ್ದಾರೆ. ಹಗರಣದ ಬಗ್ಗೆ ಗಂಭೀರವಾದ ತನಿಖೆ ನಡೆದಿಲ್ಲ. ನಿವೃತ್ತ ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಕಾಫೀ ಡೇ ಚೆರ್ಮನ್ ಆಗಿದ್ದಾರೆ. ರಂಗನಾಥ್ ಎಷ್ಟು ಪ್ರಮಾಣಿಕರೋ ಗೊತ್ತಿಲ್ಲ, ತನಿಖೆ ಸರಿಯಾಗಿ ನಡೆದಲ್ಲಿ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.

ಇದನ್ನೂ ಓದಿ:ಲಡಾಖ್ ಬಿಕ್ಕಟ್ಟಿನ ನಡುವೆ 3 ದಶಕಗಳ ನಂತರ ಭಾರತದ ಅಕ್ಕಿ ಖರೀದಿಗೆ ಮುಂದಾದ ಚೀನಾ

Advertisement

ಮಾಜಿ ಸಿಎಂ ಎಸ್ ಎಂ ಕೃಷ್ಣ ಇಂಥ ಕ್ರಿಮಿನಲ್ಸ್ ಗಳನ್ನ ಬೆಳೆಸಿದ್ದಕ್ಕೆ ರಾಜ್ಯದ ಜನರ ಕ್ಷಮೆಯಾಚಿಸಬೇಕು. ತಮ್ಮ ಅಪರಾಧಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಸೇರಿದ್ದಾರಾ ಎಂಬುದನ್ನು ತಿಳಿಸಲಿ ಎಂದು ಸವಾಲೆಸೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next