ಬೆಂಗಳೂರು: ಮಾಜಿ ಸಚಿವ,ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತರ ಕರ್ನಾಟಕದಲ್ಲಿ ಹಿನ್ನಡೆಯಾದ ಕಾರಣಕ್ಕೆ ರಾಜೀನಾಮೆ ಎಂದು ನಮೂದಿಸಿದ್ದಾರೆ.
5 ದಿನಗಳ ಹಿಂದೆಯೇ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಪಾಟೀಲ್ ಅವರು ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ನಿಯಮದನ್ವಯ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಾಲಾಗಿದೆ.
ನನಗೆ ಯಾವುದೇ ಅಸಮಾಧಾನವಿಲ್ಲ, ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ .ಚುನಾವಣೆಯಲ್ಲಿ ಹಿನ್ನಡೆಯಾದ ಹೊಣೆ ಹೊತ್ತು ರಾಜೀನಾಮೆ ಸಲಿಸಿದ್ದೇನೆ ಹೊರತು ಬೇರೆ ಕಾರಣಗಳಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನು ಸಚಿವ ಸ್ಥಾನ ಪಡೆಯಲು ಯಾವುದೇ ನಾಯಕರ ಬಳಿ ತೆರಳಿದ ಒಂದು ದಾಖಲೆ ನೀಡಿದರೂ ರಾಜಕೀಯ ಸನ್ಯಾಸ ಪಡೆದುಕೊಳ್ಳುತ್ತೇನೆ ಎಂದರು.