Advertisement

ಫೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಆದ್ಯತೆ ನೀಡಲು ಎಸ್.ಆರ್.ವಿಶ್ವನಾಥ್ ಸೂಚನೆ

01:30 PM Nov 27, 2020 | keerthan |

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿವಾರಣೆಗೆ ರೂಪಿಸಲಾಗಿರುವ ಪೆರಿಫರೆಲ್ ವರ್ತುಲ ರಸ್ತೆಯ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ಪೆರಿಫರೆಲ್ ವರ್ತುಲ ರಸ್ತೆಗೆ ಆರ್ಥಿಕ ನೆರವು ನೀಡಲು ಜಾಗತಿಕ ಮಟ್ಟದ ಮೂರು ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ಬಿಡಿಎ ಆಯುಕ್ತರಾದ ಡಾ.ಎಚ್.ಆರ್.ಮಹದೇವ ಅವರು ಅಧ್ಯಕ್ಷರ ಗಮನಕ್ಕೆ ತಂದರು.

ಈ ವೇಳೆ ಮಾತನಾಡಿದ ಅಧ್ಯಕ್ಷರು ವರ್ತುಲ ರಸ್ತೆ ನಿರ್ಮಾಣ ಕಾರ್ಯ ಶೀಘ್ರವಾಗಿ ಆರಂಭವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಬೇಕಾಗಿರುವ ಎಲ್ಲಾ ಅನುಮತಿಗಳನ್ನು ಪಡೆದು ಯೋಜನೆಗೆ ಚಾಲನೆ ನೀಡಬೇಕೆಂದು ಸೂಚಿಸಿದರು.

ನಗರದಲ್ಲಿ ಬಿಡಿಎಗೆ ಸೇರಿದ ಎಲ್ಲಾ ನಿವೇಶನಗಳು ಮತ್ತು ಇತರೆ ಆಸ್ತಿಗಳನ್ನು ಕೂಡಲೇ ಗುರುತಿಸಿ ಅವುಗಳ ವಿವರಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

Advertisement

ಇದನ್ನೂ ಓದಿ:ವೀರಶೈವ ಮೀಸಲಾತಿ ಶೀಘ್ರ ತೀರ್ಮಾನವಾಗದಿದ್ದರೆ ಹೋರಾಟ: ಪಂಚಮಸಾಲಿ ಪೀಠ ಸ್ವಾಮೀಜಿ ಎಚ್ಚರಿಕೆ

ಹೊಸದಾಗಿ ನಿರ್ಮಾಣವಾಗುತ್ತಿರುವ ಬಡಾವಣೆಗಳಲ್ಲಿ ಕಿರು ಅರಣ್ಯ ಬೆಳೆಸಲು ಸೂಚನೆ ನೀಡಿದ ಅವರು, ಇದಕ್ಕಾಗಿ ಅರಣ್ಯ ಇಲಾಖೆ ಸಹಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಫೆರಿಪರಲ್ ವರ್ತುಲ ರಸ್ತೆಯು ಸುಮಾರು 65 ಕಿಲೋಮೀಟರ್ ಉದ್ದದ ಯೋಜನೆಯಾಗಿದೆ. ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆವರೆಗೆ 18.40 ಕಿ.ಮೀ, ಬಳ್ಳಾರಿ ರಸ್ತೆಯಿಂದ ಹಳೆ ಮದ್ರಾಸ್ ರಸ್ತೆವರೆಗೆ 17.95 ಕಿಮೀ ಮತ್ತು ಹಳೆ ಮದ್ರಾಸ್ ರಸ್ತೆಯಿಂದ ಹೊಸೂರು ರಸ್ತೆವರೆಗೆ 28.80 ಕಿಲೋಮೀಟರ್ ಉದ್ದ ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next